ಸುದ್ದಿ ಕಣಜ.ಕಾಂ ಭದ್ರಾವತಿ
BHADRAVATHI: ಭದ್ರಾವತಿ ನಗರದ ಕೇಶವಾಪುರ ಬಡಾವಣೆಯ ಮನೆಯೊಂದರ ಮೇಲೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯ ಕೇಶವಾಪುರ ಬಡಾವಣೆಯ ವಾಸದ ಮನೆಯೊಂದರಲ್ಲಿ ಮಹಿಳೆಯೊಬ್ಬಳು ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಮೇಲೆ ದಾಳಿ ನಡೆಸಲಾಗಿದೆ. ಸಂತ್ರಸ್ತ ಮಹಿಳೆಯರನ್ನು ರಕ್ಷಿಸಲಾಗಿದೆ.
READ | ಅರಣ್ಯಕ್ಕೆ ಅಪಾಯ ತರಲಿದೆ ‘ಅರಣ್ಯ ಕಾಯ್ದೆ ತಿದ್ದುಪಡಿ ಮಸೂದೆ’, ಆಕ್ಷೇಪಣೆ ಸಲ್ಲಿಕೆಗೇನು ಕಾರಣ?
ವೇಶ್ಯಾವಾಟಿಕೆ ನಡೆಸುತ್ತಿದ್ದರೆನ್ನಲಾದ ಕೇಶವಾಪುರದ ಮಹಿಳೆಯೊಬ್ಬರನ್ನು ಹಾಗೂ ಗಿರಾಕಿಗಳನ್ನು ಕರೆತರುತ್ತಿದ್ದ ಪುರುಷನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಭದ್ರಾವತಿ ನಗರ ವೃತ್ತದ ಸಿಪಿಐ ರಾಘವೇಂದ್ರ ಕಾಂಡಿಕೆ, ಪಿಎಸ್.ಐ ಕೃಷ್ಣ ಕುಮಾರ್ ಮಾನೆ ನೇತೃತ್ವದಲ್ಲಿ ಸಿಬ್ಬಂದಿಯ ತಂಡವು ಕಾರ್ಯಾಚರಣೆ ನಡೆಸಿದೆ. ಆರೋಪಿಗಳ ವಿರುದ್ಧ IMMORAL TRAFFIC PREVENTION ACT ರೀತ್ಯಾ ಪ್ರಕರಣ ದಾಖಲಿಸಲಾಗಿದೆ.
Anna bhagya | ಅನ್ನ ಭಾಗ್ಯ ಯೋಜನೆ ಅಡಿ ಅಕ್ಕಿ ಅಲ್ಲ ಹಣ ಸಿಗಲಿದೆ, ಸಂಪುಟದಲ್ಲಿ ಮಹತ್ವದ ನಿರ್ಧಾರ, ಯಾರಿಗೆಷ್ಟು ಹಣ?