Power cut | ನಾಳೆ ಶಿವಮೊಗ್ಗದ ಅರ್ಧ ಶಿವಮೊಗ್ಗಕ್ಕೆ ಕರೆಂಟ್ ಕಟ್, ಎಲ್ಲೆಲ್ಲಿ ವ್ಯತ್ಯಯ, ಕಾರಣವೇನು?

POWER CUT 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರ ಉಪ ವಿಭಾಗ-2ರ ಘಟಕ-2,5,6 ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯ ಹಾಗೂ ಸ್ಮಾರ್ಟ್ ಸಿಟಿ (shimoga smart city) ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶಗಳಲ್ಲಿ ಜೂನ್ 11 ರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

READ | ನಾಳೆ, ನಾಡಿದ್ದು ಶಿವಮೊಗ್ಗಕ್ಕೆ ಕುಡಿಯುವ ನೀರು ಪೂರೈಕೆ ಆಗಲ್ಲ, ಕಾರಣವೇನು?

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಪೀಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್ ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಎಚ್‍ಬಿ ಕಾಲೂನಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎನ್.ಟಿ ರಸ್ತೆ, ಬಿ.ಎಚ್.ರಸ್ತೆ, ಒ.ಟಿ ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಮತ್ತು ಸುತ್ತ ಮುತ್ತಲಿನ ಪ್ರದೇಶ, ಜೆ.ಸಿ ನಗರ, ಬಿ.ಎಚ್ ರಸ್ತೆ, ಬುದ್ಧ ನಗರ, ಅಮೀದ್ ಅಹಮದ್ ಸರ್ಕಲ್, ಆರ್.ಎಂ.ಎಲ್ ನಗರ, ಭಾರತಿ ಕಾಲೋನಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಗಾಂಧಿ ಬಜಾರ್, ಕುಂಬಾರ ಗುಂಡಿ, ಬಿಬಿ ರಸ್ತೆ, ಕೆ,ಆರ್ ಪುರಂ, ಸೀಗೆಹಟ್ಟಿ, ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್,ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ ಲಾಲ್ ಬಂದರ್ ಕೇರಿ, ಇಲಿಯಾಸ್ ನಗರ 1ನೇ ಕ್ರಾಸ್‍ನಿಂದ 14ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯಾ ಶಾದಿಮಹಲ್, ಇಲಿಯಾಸ್ ನಗರ ಮಂಡಕ್ಕಿ ಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ, ಮಂಜುನಾಥ ಬಡಾವಣೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಫ್-05-ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-08-ರಾಮೇನಕೊಪ್ಪ ಗ್ರಾಮಾಂತರ ಪ್ರದೇಶ. ಎಫ್-18-ಹೊಸಳ್ಳಿ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ. ಎಫ್-17-ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ, ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ‌.
ಹೊಸಳ್ಳಿ ವ್ಯಾಪ್ತಿಯಲ್ಲೂ ಪವರ್ ಕಟ್
ಶಿವಮೊಗ್ಗ ತಾಲ್ಲೂಕು, ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಕೆಳಕಂಡ ಗ್ರಾಮ ಪ್ರದೇಶಗಳಲ್ಲಿ ಜೂ.11 ರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ವೀರಾಪುರ, ಈಚಲವಾಡಿ, ಹಾಯ್‍ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

READ | ಶಿವಮೊಗ್ಗದಲ್ಲಿ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ,‌ ಇಲ್ಲಿದೆ ವೇಳಾಪಟ್ಟಿ

ಮಾಚೇನಹಳ್ಳಿ ಸುತ್ತ ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110 ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಕಾರಣ ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಜೂ.11 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಕಿಯೊನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ ಬಸವಾಪುರ, ಹಾತಿಕಟ್ಟೆ ಹೊನ್ನವಿಲೆ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ಕೋರಿದೆ.
ಜೂ.13 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎ.ಎಫ್-5 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಜೂ.13 ರ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗೋಪಾಲಗೌಡ ಬಡಾವಣೆ, ಎ, ಬಿ, ಸಿ, ಡಿ, ಇ, ಎಫ್ ಬ್ಲಾಕ್, ಕೆ.ಎಚ್.ಬಿ, ಎಲ್.ಐ.ಜಿ, ಎಂ.ಐ.ಜಿ, ಪ್ರೆಸ್ ಕಾಲೋನಿ, ನೀಲಮೇಘಮ್ ಲೇಔಟ್, ಅಲ್‍ಹರೀಮ್ ಲೇಔಟ್, ಪೊಲೀಸ್ ಲೇಔಟ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Rashtriya Raksha University | ಶಿವಮೊಗ್ಗದಲ್ಲಿ ದೇಶದ 5ನೇ ರಾಷ್ಟ್ರೀಯ ರಕ್ಷಾ ವಿವಿ ಕ್ಯಾಂಪಸ್ ಆರಂಭ, ಯಾವೆಲ್ಲ ಕೋರ್ಸ್’ಗಳು ಲಭ್ಯ? ಪೂರ್ಣ ಮಾಹಿತಿ ಇಲ್ಲಿದೆ

error: Content is protected !!