ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 23 ವರ್ಷದ ವ್ಯಕ್ತಿಗೆ ಶಿಕ್ಷೆ ನೀಡಿ The Addl District and Sessions Court, FTSC–II (POCSO) ನ್ಯಾಯಾಧೀಶ ಆದೇಶಿಸಿದ್ದಾರೆ.
2019ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 23 ವರ್ಷದ ವ್ಯಕ್ತಿಯೊಬ್ಬನು 11 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುತ್ತಾನೆಂದು ನೊಂದ ಬಾಲಕಿಯು ನೀಡಿದ ದೂರಿನ ಮೇರೆಗೆ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.
READ | ರಾಜ್ಯದಲ್ಲಿ ಶೀಘ್ರ 25 ಸಾವಿರ ಶಿಕ್ಷಕರ ವರ್ಗಾವಣೆ, ಖಾಲಿ ಹುದ್ದೆಗಳ ನೇಮಕಾತಿ ಬಗ್ಗೆ ಶಿಕ್ಷಣ ಸಚಿವರು ಹೇಳಿದ್ದೇನು?
ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿ ಎನ್. ನಂಜಪ್ಪ ತನಿಖೆ ಕೈಗೊಂಡು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.
ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪಿತನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರು 3 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 2,80,000 ರೂ. ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶ ನೀಡಿರುತ್ತಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
Court news | ಉಮಾಮಹೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ವ್ಯಕ್ತಿಗೆ 6 ವರ್ಷ ಜೈಲು