Drinking Water  | ನಾಳೆ, ನಾಡಿದ್ದು ಶಿವಮೊಗ್ಗಕ್ಕೆ ಕುಡಿಯುವ ನೀರು ಪೂರೈಕೆ ಆಗಲ್ಲ, ಕಾರಣವೇನು?

Water tap

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ನಗರದಲ್ಲಿ ಎದುರಾಗಿದ್ದು, ಈ ನಡುವೆ ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (Karnataka City Water Supply and Sewerage Board) ಸಹಾಯಕ ಕಾರ್ಯಪಾಲಕ ಇಂಜಿನಿಯರ್ (AEE) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

READ | ದಿಬ್ಬಣಕ್ಕೆ ಹೊರಟಿದ್ದ ಆಟೋಗೆ ಭೀಕರ ಅಪಘಾತ, ಒಬ್ಬ ಸಾವು

ನೀರು ಪೂರೈಕೆಯಲ್ಲಿ ವ್ಯತ್ಯಯಕ್ಕೇನು ಕಾರಣ?
ಮೆಸ್ಕಾಂನಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಆಗುವ 110/11 ಕೆವಿ ವಿದ್ಯುತ್ ವಿತರಣೆ ಕೇಂದ್ರದ ದುರಸ್ತಿ ಮತ್ತು ನಿರ್ವಹಣೆ ಸಂಬಂಧ ಜೂ.11ರಂದು ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಯಾವಾಗ ನೀರು ಪೂರೈಕೆಯಲ್ಲಿ ವ್ಯತ್ಯಯ?
ವಿದ್ಯುತ್ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ಜೂ.11 ಮತ್ತು 12ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹೀಗಾಗಿ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಕೋರಲಾಗಿದೆ.

Areca leaf spot daisies | ಅಡಿಕೆ ಎಲೆಚುಕ್ಕೆ ರೋಗ ಭೀತಿ, ನಿರ್ವಹಣೆ ಹೇಗೆ?

error: Content is protected !!