ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಂಡ್ಯ ನಿಲ್ದಾಣ ಹತ್ತಿರದ ಲೆವೆಲ್ ಕ್ರಾಸ್ ಗೇಟ್ ನಂ-73ರ ಕೆಳ ಸೇತುವೆ ಕಾಮಗಾರಿಯ ಸಲುವಾಗಿ ಈ ಕೆಳಗಿನ ಕೆಲವು ರೈಲುಗಳ ರದ್ದು ಮತ್ತು ಮಾರ್ಗ ಬದಲಾವಣೆ ಮಾಡಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗಡೆ ತಿಳಿಸಿದ್ದಾರೆ. ಕೆಲವು ರೈಲುಗಳು ರದ್ದು/ ಮಾರ್ಗ ಮಧ್ಯ ನಿಯಂತ್ರಣ ಮಾಡಲಾಗುತ್ತಿದೆ. ಅವುಗಳ ಮಾಹಿತಿಯ ವಿವರ ಇಲ್ಲಿದೆ.
READ | ಸ್ವಾತಂತ್ರ್ಯ ದಿನಕ್ಕೆ ಡಿಎಆರ್ ಮೈದಾನದಲ್ಲಿ ಜರ್ಮನ್ ಟೆಂಟ್, ಜಿಲ್ಲೆಯಲ್ಲಿ ಈ ಸಲದ ವಿಶೇಷಗಳೇನು?
ರೈಲುಗಳ ರದ್ದು
1. ರೈಲು ಸಂಖ್ಯೆ 06270 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಮೈಸೂರು ದೈನಂದಿನ ವಿಶೇಷ ಎಕ್ಸ್ಪ್ರೆಸ್ ರೈಲನ್ನು ಜುಲೈ 30 ರಂದು ರದ್ದುಗೊಳಿಸಲಾಗುತ್ತಿದೆ.
2. ರೈಲು ಸಂಖ್ಯೆ 06268 ಮೈಸೂರು-ಅರಸಿಕೆರೆ ದೈನಂದಿನ ವಿಶೇಷ ಎಕ್ಸ್ಪ್ರೆಸ್ ರೈಲನ್ನು ಜುಲೈ 31 ರಂದು ರದ್ದುಗೊಳಿಸಲಾಗುತ್ತಿದೆ.
ಮಾರ್ಗ ಮಧ್ಯ ನಿಯಂತ್ರಣ
1. ಜುಲೈ 30 ರಂದು ಹುಬ್ಬಳ್ಳಿ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16591 ಎಸ್.ಎಸ್.ಎಸ್ ಹುಬ್ಬಳ್ಳಿ-ಮೈಸೂರು ದೈನಂದಿನ ಹಂಪಿ ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯ 30 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
2. ಜುಲೈ 30 ರಂದು ಮೈಲಾಡುತುರೈ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16231 ಮೈಲಾಡುತುರೈ-ಮೈಸೂರು ದೈನಂದಿನ ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯ 30 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
3. ಜುಲೈ 30 ರಂದು ತಾಳಗುಪ್ಪ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16228 ತಾಳಗುಪ್ಪ-ಮೈಸೂರು ದೈನಂದಿನ ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯ 45 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
4. ಜುಲೈ 30 ರಂದು ತಿರುಪತಿ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16220 ತಿರುಪತಿ-ಚಾಮರಾಜನಗರ ದೈನಂದಿನ ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯ 90 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
5. ಜುಲೈ 30 ರಂದು ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16021 ಡಾ ಎಂ.ಜಿ.ಆರ್ ಚೆನ್ನೈ ಸೆಂಟ್ರಲ್-ಮೈಸೂರು ದೈನಂದಿನ ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯ 120 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
ರೈಲುಗಳು ಭಾಗಶಃ ರದ್ದು/ ತಡವಾಗಿ ಪ್ರಾರಂಭ/ನಿಯಂತ್ರಣ
ತುಮಕೂರು-ಅರಸೀಕೆರೆ ಭಾಗದ ಹೆಗ್ಗೆರೆ ನಿಲ್ದಾಣದ ಪಾದಾಚಾರಿಗಳ ಮೇಲ್ಸೆತುವೆ ಕಾಮಗಾರಿ ಸಲುವಾಗಿ ಆಗಸ್ಟ್ 1 ರಂದು ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಇರುವುದರಿಂದ ಈ ಕೆಳಗಿನ ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಅವುಗಳ ವಿವರ.
ರೈಲು ಭಾಗಶಃ ರದ್ದು
1. ರೈಲು ಸಂಖ್ಯೆ 06514 ಶಿವಮೊಗ್ಗ ಟೌನ್(SMET) -ತುಮಕೂರು (Tumkur) ವಿಶೇಷ ಡೆಮು ರೈಲನ್ನು ತಿಪಟೂರು ಮತ್ತು ತುಮಕೂರು ನಿಲ್ದಾಣಗಳ ನಡುವೆ ಆಗಸ್ಟ್ 1 ರಂದು ಭಾಗಶಃ ರದ್ದುಗೊಳಿಸಲಾಗುತ್ತಿದೆ.
ರೈಲುಗಳು ತಡವಾಗಿ ಪ್ರಾರಂಭ
1. ಆಗಸ್ಟ್ 1 ರಂದು ತುಮಕೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 06512 ತುಮಕೂರು-ಬಾನಸವಾಡಿ ಡೆಮು ವಿಶೇಷ ರೈಲು 120 ನಿಮಿಷ ಕಾಲ ತಡವಾಗಿ ಪ್ರಾರಂಭವಾಗಲಿದೆ.
2. ಆಗಸ್ಟ್ 1 ರಂದು ತುಮಕೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16567 ತುಮಕೂರು-ಶಿವಮೊಗ್ಗ ಟೌನ್ ಡೈಲಿ ವಿಶೇಷ ಎಕ್ಸ್ಪ್ರೆಸ್ ರೈಲು 15 ನಿಮಿಷ ಕಾಲ ತಡವಾಗಿ ಪ್ರಾರಂಭವಾಗಲಿದೆ.
ರೈಲು ನಿಯಂತ್ರಣ
1. ರೈಲು ಸಂಖ್ಯೆ 12089 ಕೆ.ಎಸ್.ಆರ್ ಬೆಂಗಳೂರು-ಶಿವಮೊಗ್ಗ ಟೌನ್ ಜನಶತಾಬ್ದಿ ಎಕ್ಸ್ಪ್ರೆಸ್ ರೈಲನ್ನು ಆಗಸ್ಟ್ 1 ರಂದು ಮಾರ್ಗ ಮಧ್ಯ 30 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ
Railway | ರೈಲ್ವೆ ಪ್ರಯಾಣಿಕರ ಗಮನಕ್ಕೆ, ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆ, ಕಾರಣವೇನು?