Public library | ರಾಜ್ಯಮಟ್ಟದ ಆಯ್ಕೆಗಾಗಿ ಪುಸ್ತಕಗಳ ಆಹ್ವಾನ, ಏನೆಲ್ಲ‌ ನಿಬಂಧನೆಗಳು ಅನ್ವಯ?

Public Notice

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸಾರ್ವಜನಿಕ ಗ್ರಂಥಾಲಯ ಇಲಾಖೆಯ (department of public libraries) ಗ್ರಂಥಾಲಯಗಳಿಗೆ ಏಕಗವಾಕ್ಷಿ ಯೋಜನೆ(Single window scheme)ಯಡಿ 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಣೆಯಾದ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಆಹ್ವಾನಿಸಲಾಗಿದೆ.

READ | ಪೊಲೀಸರ ಮೊಬೈಲ್’ನಲ್ಲಿ ವಿಡಿಯೋ ಪ್ರತ್ಯಕ್ಷ, ಖಾಸಗಿ‌ ಬಸ್ ಚಾಲಕನಿಗೆ ಬಿತ್ತು ದಂಡ

2023ರ ಜನವರಿಯಿಂದ ಜೂನ್ ವರೆಗೆ ಪ್ರಥಮ ಮುದ್ರಣವಾಗಿ ಪ್ರಕಟವಾದ ಸಾಹಿತ್ಯ, ಕಲೆ, ವಿಜ್ಞಾನ, ಪಠ್ಯ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಮಕ್ಕಳ ಸಾಹಿತ್ಯ, ಸ್ಪರ್ಧಾತ್ಮಕ, ಪಠ್ಯಪುಸ್ತಕ, ಸಾಂದರ್ಭಿಕ ಮತ್ತು ಇತ್ಯಾದಿ ವಿಷಯಗಳ ಕನ್ನಡ/ಆಂಗ್ಲ/ಭಾರತೀಯ ಇತರೆ ಭಾಷೆಯ ಗ್ರಂಥಗಳ ಆಯ್ಕೆಗಾಗಿ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ಜು. 31ರೊಳಗಾಗಿ ಸಲ್ಲಿಸುವುದು.
ನಿಗದಿತ ಅರ್ಜಿ ನಮೂನೆ ಮತ್ತು ನಿಬಂಧನೆಗಳ ಮಾಹಿತಿಗಾಗಿ ಇಲಾಖಾ ಅಂತರ್ಜಾಲ www.dpl.karnataka.gov.in ಹಾಗೂ ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಶಕರು/ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿಗಳಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22864990/ 22867358 ಗಳನ್ನು ಸಂಪರ್ಕಿಸುವಂತೆ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ(ಪ್ರ) ತಿಳಿಸಿದ್ದಾರೆ.

error: Content is protected !!