ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲಾ ಪೊಲೀಸ್ ಇಲಾಖೆ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಮಂಗಳವಾರದಿಂದ ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಿದೆ. ಪ್ರಮುಖ ವೃತ್ತಗಳಲ್ಲಿ ವಾಹನ ಸವಾರರ ತಡೆದು ಪರಿಶೀಲನೆ ನಡೆಸಿ ಜಾಗೃತಿ ಮೂಡಿಸಲಾಗುತ್ತಿದೆ.
READ | ಸಾಗರದಲ್ಲಿ ಧರೆಗುರುಳಿದ ಜೈಲು ಕಾಂಪೌಂಡ್, ಅಪಾಯ ಮೀರಿ ಹರಿಯುತ್ತಿರುವ ನದಿಗಳು, ಎಲ್ಲಿ ಏನು ಹಾನಿ?
ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವವರ ಹೆಲ್ಮೆಟ್ ವಶಕ್ಕೆ ಪಡೆಯಲಾಗಿದೆ.
ಒಂದೇ ದಿನ ಸಾವಿರಕ್ಕೂ ಹೆಚ್ಚು ಹೆಲ್ಮೆಟ್ ವಶ
ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್ ಮತ್ತು ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧಿಕ ಅನಿಲ್ ಕುಮಾರ್ ಬೊಮ್ಮರೆಡ್ಡಿ ಮಾರ್ಗದರ್ಶನದಲ್ಲಿ ಶಿವಮೊಗ್ಗ ಬಿ ಉಪ ವಿಭಾಗ ಡಿವೈಎಸ್ಪಿ ಎಂ. ಸುರೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಮಂಗಳವಾರ ಬೆಳಗ್ಗೆಯಿಂದಲೇ ಪೊಲೀಸರು ಶಿವಪ್ಪ ನಾಯಕ ವೃತ್ತ ಸೇರಿದಂತೆ ಎರಡು ಕಡೆ ಕಾರ್ಯಾಚರಣೆ ನಡೆಸಿದ್ದು, 1,000ಕ್ಕೂ ಅಧಿಕ ಹಾಫ್ ಹೆಲ್ಮೆಟ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ವಿಶೇಷ ಕಾರ್ಯಾಚರಣೆಯ ಮುಖಾಂತರ ಐಎಸ್ಐ ಪ್ರಮಾಣಿತವಲ್ಲದ Half Helmet ಧರಿಸಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವಾಹನ ಸವಾರರನ್ನು ತಡೆದು, ಜಾಗೃತಿ ಮೂಡಿಸಲಾಗಿದೆ.
ವಿಧಿಸಲಾಗುವುದು ದಂಡ
ಮುಂದಿನ ದಿನಗಳಲ್ಲಿ Half Helmet ಧರಿಸಿ ದ್ವಿ ಚಕ್ರ ವಾಹನ ಚಲಾಯಿಸುವವರ ವಿರುದ್ಧ ಐಎಂವಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು.