Court News | ಕೌಟುಂಬಿಕ ಜಗಳದಲ್ಲಿ ಪತ್ನಿಯ ಕೊಲೆಗೈದವನಿಗೆ ಜೀವಾವಧಿ ಶಿಕ್ಷೆ

Judgement

 

 

ಸುದ್ದಿ ಕಣಜ.ಕಾಂ ಭದ್ರಾವತಿ
BHADRAVATHI: ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ ತನ್ನ ಪತ್ನಿಗೆ ಆಯುಧದಿಂದ ತಲೆಗೆ ಹಲ್ಲೆ ಮಾಡಿ ಕೊಲೆ ಮಾಡಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ (Life imprisonment) ವಿಧಿಸಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪೀಠಾಸೀನ ಭದ್ರಾವತಿ ನ್ಯಾಯಾಲಯದಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ.
ಹೊಳೆಹೊನ್ನೂರು ಟೌನ್ ನಿವಾಸಿ ಗಣೇಶ್(44) ವಿರುದ್ಧದ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ನ್ಯಾಯಾಧೀಶ ಶಶೀಧರ್ ಅವರು ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿರುತ್ತಾರೆ.

READ | ರಾಜ್ಯದಲ್ಲೇ ಪೆಟ್ರೋಲ್ ಬೆಲೆ ದಾವಣಗೆರೆಯಲ್ಲಿ ತುಟ್ಟಿ, ನಂತರದ ಸ್ಥಾನದಲ್ಲಿವೆ ಬಳ್ಳಾರಿ, ಶಿವಮೊಗ್ಗ, ಇಂದಿನ ಬೆಲೆ ಎಷ್ಟು?

ಪ್ರಕರಣದ ಹಿನ್ನೆಲೆ
ಗಣೇಶ್ ಎಂಬಾತ ತನ್ನ ಪತ್ನಿ ಗೀತಾ(40)ರನ್ನು ಆಯುಧದಿಂದ ತಲೆಗೆ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಮೃತೆಯ ಸಹೋದರಿ ನೀಡಿದ ದೂರಿನ ಆಧಾರದ ಮೇಲೆ ಹೊಳೆಹೊನ್ನೂರು ಪೆÇಲೀಸ್ ಠಾಣೆಗೆ ದೂರು ನೀಡಿದ್ದರು. ಭದ್ರಾವತಿ ಗ್ರಾಮಾಂತರ ವೃತ್ತದ ಸಿಪಿಐ ಆಗಿನ ತನಿಖಾಧಿಕಾರಿಗಳಾದ ಮಂಜುನಾಥ್ ಅವರು ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕಿ ರತ್ನಮ್ಮ ವಾದ ಮಂಡಿಸಿದ್ದರು.

Shimoga rain | ಮಲೆನಾಡಿನಲ್ಲಿ ಭಾರೀ ಮಳೆ‌ಕೊರತೆ, ಶಿವಮೊಗ್ಗದಲ್ಲಿ ಎಷ್ಟು ಮಳೆಯಾಗಿದೆ? ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

error: Content is protected !!