ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಸ್ಮಾರ್ಟ್ ಸಿಟಿ (shimoga smart city) ವ್ಯವಸ್ಥಾಪಕ ನಿರ್ದೇಶಕ (MD) ಚಿದಾನಂದ ವಟಾರೆ (Chidananad vathare) ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇವರನ್ನು ಬೆಂಗಳೂರಿನ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಲಾಗಿದೆ. ವಟಾರೆ ಅವರಿದ್ದ ಜಾಗಕ್ಕೆ ಇದುವರೆಗೆ ಯಾವುದೇ ಅಧಿಕಾರಿಯನ್ನು ಹೆಸರಿಸಿಲ್ಲ.
ಆಯುಕ್ತರಾಗಿ ಶಿವಮೊಗ್ಗಕ್ಕೆ ಆಗಮನ
2019ರ ಅಕ್ಟೋಬರ್ 1ರಂದು ಶಿವಮೊಗ್ಗ ಮಹಾನಗರ ಪಾಲಿಕೆ (shimoga city corporation) ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು. ಚಾರುಲತಾ ಸೋಮಲ್ ಅವರ ವರ್ಗಾವಣೆ ನಂತರ ಇವರು ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು. ಶಿವಮೊಗ್ಗ ಪಾಲಿಕೆ ಆಯುಕ್ತರಾಗಿದ್ದಾಗಲೇ ಸ್ಮಾರ್ಟ್ ಸಿಟಿ ಎಂಡಿಯಾಗಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು. ನಂತರ, ಪೂರ್ಣ ಪ್ರಮಾಣದಲ್ಲಿ ಸ್ಮಾರ್ಟ್ ಸಿಟಿ ಎಂಡಿ ಸ್ಥಾನ ನೀಡಲಾಯಿತು.