ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ವಿನೋಬನಗರ (vinoba nagar) ಆರ್ಎಂಸಿಯ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಮುಂಭಾಗದಲ್ಲಿ ಇಸ್ಪೀಟು ಆಡುತ್ತಿದ್ದವರ ಮೇಲೆ ಪೊಲೀಸರು ಭಾನುವಾರ ದಾಳಿ ನಡೆಸಿದ್ದಾರೆ.
READ | ಸಹಾಯಕ ಪ್ರಾಧ್ಯಾಪಕರುಗಳ ನೇಮಕಾತಿಗೆ ನೇರ ಸಂದರ್ಶನ, ಯಾವಾಗ ನಡೆಯಲಿದೆ, ಯಾರೆಲ್ಲ ಪಾಲ್ಗೊಳ್ಳಬಹುದು?
ಖಚಿತ ಮಾಹಿತಿ ಮೇರೆಗೆ ವಿನೋಬನಗರ ಪೊಲೀಸ್ ಠಾಣೆಯ ಪಿಎಸ್ಐ ಬಿ.ಸಿ.ಸುನೀಲ್ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡಿದೆ. ಇಸ್ಪೀಟು ಆಡುತ್ತಿದ್ದ ಆರು ಜನ ಆರೋಪಿತರನ್ನು ವಶಕ್ಕೆ ಪಡೆದು, ಆರೋಪಿತರಿಂದ ಜೂಜಾಟಕ್ಕೆ ಪಣವಾಗಿ ಇಟ್ಟಿದ್ದ ₹11,320 ನಗದು ಹಣ ಮತ್ತು ಇಸ್ಪೀಟು ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.