ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸರ್ಕಾರದ ಸ್ವತಂತ್ರ, ಶಿಸ್ತುಬದ್ಧ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ (Home Guards) ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹ ರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹರು ಅರ್ಜಿ ಸಲ್ಲಿಸುವಂತೆ ಗೃಹ ರಕ್ಷಕದಳ ಜಿಲ್ಲಾ ಗೌರವ ಸಮಾದೇಷ್ಟ ಎಂ.ಪಿ.ಚಂದನ್ ಪಟೇಲ್ ತಿಳಿಸಿದ್ದಾರೆ.
READ | ಶಿವಮೊಗ್ಗದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಮೇಜರ್ ಸರ್ಜರಿ, ಏನೆಲ್ಲ ಬದಲಾವಣೆ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
ಪುರುಷ ಒಟ್ಟು 115 ಮತ್ತು ಮಹಿಳೆ 07 ಸ್ಥಾನಗಳಿಗೆ ಅರ್ಜಿಗಳನ್ನು ಆ.25 ರಿಂದ ಸೆಪ್ಟೆಂಬರ್ 10 ರೊಳಗೆ ಸಲ್ಲಿಸಬಹುದು. ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಕೆಳಗೆ ತಿಳಿಸಲಾದ ಗೃಹರಕ್ಷಕ ದಳ ಘಟಕ/ ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ.
ತಾಲೂಕುವಾರು ಖಾಲಿ ಇರುವ ಹುದ್ದೆಗಳ ವಿವರ
ಶಿವಮೊಗ್ಗದಲ್ಲಿ ಪುರುಷ 29, ಮಹಿಳೆ 5 ಸಂಪರ್ಕಿಸಬೇಕಾದ ಘಟಕಾಧಿಕಾರಿ ಜಿ.ಇ.ಶಿವಾನಂದಪ್ಪ ಮೊ.ಸಂ: 9880705966. ಹಾರನಹಳ್ಳಿ ಪುರುಷ 7 ಘಟಕಾಧಿಕಾರಿ ಸಿ.ಮಧು 9686631428. ಭದ್ರಾವತಿ ಪುರುಷ 14, ಮಹಿಳೆ 2 ಘಟಕಾಧಿಕಾರಿ ಜಗದೀಶ್ 9900283490. ಹೊಳೆಹೊನ್ನೂರು ಪುರುಷ 7 ಘಟಕಾಧಿಕಾರಿ ಹೆಚ್.ಎಸ್.ಸುನೀಲ್ ಕುಮಾರ್ 8105840345. ತೀರ್ಥಹಳ್ಳಿ ಪುರುಷ 10, ಘಟಕಾಧಿಕಾರಿ ಹೆಚ್.ಪಿ.ರಾಘವೇಂದ್ರ 9535388472. ಸಾಗರ ಪುರುಷ 3 ಘಟಕಾಧಿಕಾರಿ ಎಂ.ರಾಘವೇಂದ್ರ 9632614031. ಜೋಗ ಪುರುಷ 4 ಘಟಕಾಧಿಕಾರಿ ಡಿ.ಸಿದ್ದರಾಜು 9449699459. ಆನಂದಪುರ ಪುರುಷ 7 ಘಟಕಾಧಿಕಾರಿ ಎಂ.ರಾಘವೇಂದ್ರ 9632614031. ಶಿಕಾರಿಪುರ ಪುರುಷ 4 ಡಾ.ಸಂತೋಷ್ ಎಸ್ ಶೆಟ್ಟಿ 9845402789. ಶಿರಾಳಕೊಪ್ಪ ಪುರುಷ 5 ಘಟಕಾಧಿಕಾರಿ ಸೈಯದ್ ಇಸಾಕ್ 8861492078. ಹೊಸನಗರ ಪುರುಷ 10 ಘಟಕಾಧಿಕಾರಿ ಕೆ.ಅಶೋಕ್ 9241434669. ರಿಪ್ಪನ್ಪೇಟೆ ಪುರುಷ 03 ಘಟಕಾಧಿಕಾರಿ ಟಿ.ಶಶಿಧರಾಚಾರ್ಯ 9741477689. ಸೊರಬ ಪುರುಷ 8 ಘಟಕಾಧಿಕಾರಿ ಬಿ.ರೇವಣಪ್ಪ 9945066084.
READ | ಶಿವಮೊಗ್ಗದ ಹಲವೆಡೆ ಎರಡು ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಏನೆಲ್ಲ ಷರತ್ತುಗಳು ಅನ್ವಯ?
- ಗೃಹರಕ್ಷಕರಾಗಲು ಭಾರತೀಯ ಪ್ರಜೆಯಾಗಿರಬೇಕು.
- 19 ವರ್ಷ ಮೇಲ್ಪಟ್ಟು 45 ಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು.
- 10ನೇ ತರಗತಿ ಉತ್ತೀರ್ಣರಾಗಿರಬೇಕು.
- ವೈದ್ಯಕೀಯವಾಗಿ ಸಶಕ್ತರಾಗಿರಬೇಕು.
- ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆ/ಆರೋಪ ಅಥವಾ ಅಪರಾಧಿ ಎಂದು ನಿರ್ಣಯಿಸಲಾಗಿರದಿದ್ದಲ್ಲಿ/ ದಾಖಲಾಗಿರದಿದ್ದಲ್ಲಿ ಅಂತಹವರು ಹಾಗೂ ಘಟಕ ಇರುವ ಸ್ಥಳದಿಂದ ಸುಮಾರು 8 ರಿಂದ 12 ಕಿ.ಮೀ ಅಂತರದಲ್ಲಿರುವವರು ಅರ್ಜಿಗಳನ್ನು ಸಲ್ಲಿಸಬಹುದು.
Smart Traffic | ಟ್ರಾಫಿಕ್ ನಿಯಮ ಉಲ್ಲಂಘಿಸುವ ಮುನ್ನ ಎಚ್ಚರ, ಮನೆಗೆ ಬರಲಿದೆ ದಂಡದ ನೋಟಿಸ್, ಯಾವಾಗಿಂದ ಅನ್ವಯ?