ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಇನ್ನು ಮುಂದೆ ಜನನ/ ಮರಣ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಅಂಚೆಯಣ್ಣನ ಮೂಲಕ ತಲುಪಿಸುವ ವಿಶಿಷ್ಟ ಸೇವೆಯನ್ನು ಶಿವಮೊಗ್ಗ ಅಂಚೆ ವಿಭಾಗದಲ್ಲಿ ಪರಿಚಯಿಸಲಾಗಿದೆ.
ಭಾರತೀಯ ಅಂಚೆ ಇಲಾಖೆ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಸಹಯೋಗದಲ್ಲಿ ಈ ವಿಶಿಷ್ಟ ಸೇವೆಗೆ ಚಾಲನೆ ನೀಡಲಾಗಿದೆ.
ಪ್ರಮಾಣ ಪತ್ರ ಪಡೆಯುವುದು ಹೇಗೆ?
READ | ಬೈಕ್ ರೇಸಿಂಗ್ ಮಾಡಿದ ಇಬ್ಬರಿಗೆ ನ್ಯಾಯಾಲಯ ದಂಡ
ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿನಲ್ಲಿ ಪಡೆಯಲು ಮಹಾನಗರ ಪಾಲಿಕೆ ಜನನ/ ಮರಣ ಕೌಂಟರ್ ನಲ್ಲಿ ನಿಗದಿತ ನಮೂನೆ ಅರ್ಜಿ ಪಡೆದು, ನಿಮ್ಮ ವಿಳಾಸವನ್ನು ನಮೂದಿಸಿ ಕೋರಿಕೆಯನ್ನು ಸಲ್ಲಿಸಬಹುದಾಗಿದೆ. ಪ್ರಮಾಣ ಪತ್ರವನ್ನು ಅಂಚೆ ಇಲಾಖೆಯ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಲಾಗುವುದು. ವಿಳಾಸದಾರರು ಬಟವಡೆಯ ಸಮಯದಲ್ಲಿ ₹80 ಗಳನ್ನು ಪಾವತಿಸಿ ಜನನ/ ಮರಣ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ ಎಂದು ಶಿವಮೊಗ್ಗ ಅಂಚೆ ಅಧೀಕ್ಷಕ ಜಿ.ಜಯರಾಮ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Milk, Curd price | ಇಂದಿನಿಂದ ಹಾಲು, ಮೊಸರು ಸೇರಿ ನಂದಿನ ಉತ್ಪನ್ನಗಳ ದರ ಏರಿಕೆ, ಯಾವುದರ ಬೆಲೆ ಎಷ್ಟು ಹೆಚ್ಚಳ?