One click many news | ತುಂಗಾ ನದಿಯಲ್ಲಿ ಶವ ಪತ್ತೆ, ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಇನ್ನಷ್ಟು ಸುದ್ದಿಗಳು..

one click many news 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ (Kote Anjaneyaswamy temple) ಹಿಂಭಾಗ ಇರುವ ಭೀಮೇಶ್ವರ ಮಡುವಿನ ತುಂಗಾ ನದಿಯಲ್ಲಿ ಆ.11 ರ ಬೆಳಗ್ಗೆ ಸುಮಾರು 70-75 ವಯಸ್ಸಿನ ಅಪರಿಚಿತ ಹೆಂಗಸಿನ ಶವ ಅಂಗಾತನೆ ತೇಲುತ್ತಾ ಇರುವುದು ಕಂಡುಬಂದಿದೆ.
ಮೃತ ಮಹಿಳೆ ಸುಮಾರು 5 ಅಡಿ ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು,ಹಳದಿ ಬಣ್ಣದ ಲಂಗ, ಹಸಿರು ಬಣ್ಣದ ರವಿಕೆ, ನೀಲಿ ಬಣ್ಣದ ಸೀರೆ ಧರಿಸಿರುತ್ತಾರೆ. ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ಕೋಟೆ ಪೊಲೀಸ್‌ ಠಾಣೆ ದೂರವಾಣಿ ಸಂಖ್ಯೆ : 08182-261415 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

READ | ಟ್ರಾಫಿಕ್ ನಿಯಮ ಉಲ್ಲಂಘಿಸುವ ಮುನ್ನ ಎಚ್ಚರ, ಮನೆಗೆ ಬರಲಿದೆ ನೋಟಿಸ್, ಯಾವಾಗಿಂದ ಅನ್ವಯ?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ

SHIMOGA: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ 2022ರ ಆ.1 ರಿಂದ 2023ರ ಜುಲೈ 31 ರೊಳಗೆ ತಮ್ಮ ಪ್ರಾಣದ ಹಂಗನ್ನು ತೊರೆದು, ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ₹10,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲಾಗುವುದು.
ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗೀಗೆ ತಲಾ ₹25,000 ಗಳ ನಗರದು ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ₹1 ಲಕ್ಷಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲಾಗುವುದು.
ಅರ್ಜಿ ಸಲ್ಲಿಸುವವರು ವ್ಯಕ್ತಿ/ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ವರದಿ ಪಡೆದು ಅರ್ಜಿಯೊಂದಿಗೆ ಸಲ್ಲಿಸುವುದು.
ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 15 ರೊಳಗೆ ಈ ಕಚೇರಿಗೆ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಸಹಾಯಧನ ನೀಡಲು ಅರ್ಜಿ ಆಹ್ವಾನ

SHIMOGA: ಶಿಕಾರಿಪುರ ತೋಟಗಾರಿಕೆ ಇಲಾಖೆಯು 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ವಿವಿಧ ಕಾರ್ಯಕ್ರಮಗಳಡಿ ಹೊಸತೋಟ ಪ್ರದೇಶ ವಿಸ್ತರಣೆಯಡಿ ಅಂಗಾಂಶ ಬಾಳೆ, ಬಿಡಿಹೂಗಳು, ಕಟ್ ಪ್ಲವರ್, ಸುಗಂಧರಾಜ, ಕಾಳುಮೆಣಸು, ತರಕಾರಿ ಪ್ರದೇಶ ವಿಸ್ತರಣೆ, ಮಾವು ಪುನಃಶ್ಚೇತನ, ಕೃಷಿಹೊಂಡ, ತರಕಾರಿ ಬೆಳೆಗೆ ಪ್ಲಾಸ್ಟಿಕ್ ಹೊದಿಕೆ, ಪ್ಯಾಕ್‍ಹೌಸ್ ಮತ್ತು ಪ್ರಾಥಮಿಕ ಸಂಸ್ಕರಣಾ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶಿಕಾರಿಪುರ ತಾಲ್ಲೂಕಿನ ಆಸಕ್ತ ಹಾಗೂ ಅರ್ಹ ರೈತರು ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 31 ರೊಳಗೆ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಶಿಕಾರಿಪುರ ತೋಟಗಾರಿಕೆ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08187-223544 ನ್ನು ಸಂಪರ್ಕಿಸುವುದು.

READ | ಶಿವಮೊಗ್ಗದ ಹಲವೆಡೆ ಎರಡು ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಲೋಕಾಯುಕ್ತ ಬಲೆಗೆ ಉಪ ತಹಶೀಲ್ದಾರ್

Lokayukta shivamogga

SHIMOGA: ಬಗರ್‌ ಹುಕುಂ ಭೂಮಿ ಖಾತೆ ವಿಷಯವಾಗಿ ₹35 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಪಡೆಯುವಾಗ ತಾಲೂಕು ಹೊಳಲೂರು ಗ್ರಾಮದ ನಾಡ ಕಚೇರಿ ಉಪ ತಹಶೀಲ್ದಾರ್‌ ಪರಮೇಶ್‌ ನಾಯ್ಕ್‌ ಮತ್ತು ಮಧ್ಯವರ್ತಿ ಪ್ರಕಾಶ್‌ ನಾಯ್ಕ್‌ ಬಲೆಗೆ ಬಿದ್ದಿದ್ದಾರೆ.
ಹೊಳಲೂರು ಹೋಬಳಿಯ ಕ್ಯಾತನಕೊಪ್ಪ ಗ್ರಾಮದಲ್ಲಿನ ಬಗರ್‌ ಹುಕುಂ ಭೂಮಿಯ ಪಹಣಿ ಮಾಡಿ ಕೊಡಲು ಅರ್ಜಿ ಸಲ್ಲಿಸಿದ್ದು, ಅದಕ್ಕೆ ಮಧ್ಯವರ್ತಿಯ ಮೂಲಕ ಲಂಚಕ್ಕೆ ಬೇಡಿಕೆ ಇಡಲಾಗಿದೆ. ಈ ವೇಳೆ, ಲಂಚದ ಹಣದಲ್ಲಿ ₹30 ಸಾವಿರ ನೋಡುವಾಗ ಲೋಕಾಯುಕ್ತರು ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯಕ್ತರು ತಿಳಿಸಿದ್ದಾರೆ.

Shimoga Parking | ಶಿವಮೊಗ್ಗದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಮೇಜರ್ ಸರ್ಜರಿ, ದಿನ ಬಿಟ್ಟು ದಿನ ವಾಹನ ನಿಲುಗಡೆಗೆ ಅಧಿಸೂಚನೆ

error: Content is protected !!