ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಮ್ ಸ್ಟೇಗಳು ಸರ್ಕಾರದ ಅದೇಶದನ್ವಯ ಪ್ರವಾಸೋದ್ಯಮ ಇಲಾಖೆ (Tourism department)ಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಬಹಳಷ್ಟು ಕಾಲಾವಕಾಶ ನೀಡಿದರೂ ನೋಂದಣಿ ಮಾಡಿರದ ಹೋಮ್ ಸ್ಟೇ ಮಾಲೀಕರು ಆಗಸ್ಟ್-31ರೊಳಗಾಗಿ ನೋಂದಾಯಿಸಿಕೊಳ್ಳುವುದು. ತಪ್ಪಿದ್ದಲ್ಲಿ ಅಂತಹ ಹೋಂ ಸ್ಟೇಗಳನ್ನು ರದ್ದುಪಡಿಸಲು ಸೂಕ್ತ ಕ್ರಮ ಕೈಗೊಳ್ಳಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.
READ | ಶಿವಮೊಗ್ಗದಿಂದ ಹೊರಡುವ ರೈಲು ರದ್ದು, ಜನ್ ಶತಾಬ್ದಿ ಅರ್ಧ ಗಂಟೆ ವಿಳಂಬ, ಕಾರಣವೇನು?
ನೀಡಿರುವ ಸೂಚನೆಗಳೇನು?
- 2015-20ನೇ ಸಾಲಿನಲ್ಲಿ ಹೋಮ್ ಸ್ಟೇ ನಡೆಸಲು ನೀಡಿರುವ ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿದ್ದು, ಅಂತಹ ಹೋಮ್ ಸ್ಟೇಗಳು ಪರವಾನಿಗೆಯನ್ನು ನವೀಕರಿಸುವುದು. ಈ ಸಂಬಂಧ ಇಲಾಖೆಯು ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಅಂತರ್ಜಾಲ ತಾಣ http://karnatakatourism.org, ಅಥವಾ http://kttf.karnatakatourism.org ಮುಖಾಂತರ ಅನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳುವುದು.
- ಹೋಮ್ ಸ್ಟೇ ಪರಿವೀಕ್ಷಣೆಗಾಗಿ ಅಧಿಕಾರಿಗಳು ಭೇಟಿ ನೀಡಿದಾಗ ಹೋಮ್ ಸ್ಟೇ ಪ್ರಮಾಣ ಪತ್ರ ಅಥವಾ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿಗಳನ್ನು ಹಾಜರುಪಡಿಸುವುದು. ಇಲ್ಲವಾದಲ್ಲಿ ಮಾಲೀಕರ ಮೇಲೆ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.
- ಅನುಮತಿ ಅಥವಾ ಪರವಾನಿಗೆ ಪಡೆಯದೇ ಅನಧಿಕೃತವಾಗಿ ನಡೆಸುತ್ತಿರುವ ಹೋಮ್ ಸ್ಟೇಗಳ ಬಗ್ಗೆ ಸಾರ್ವಜನಿಕರಲ್ಲಿ ಮಾಹಿತಿ/ದೂರು ಇದ್ದಲ್ಲಿ ಅವುಗಳ ವಿವರಗಳನ್ನು ಪತ್ರ ಮುಖೇನ ಸಹಾಯಕ ನಿರ್ದೇಶಕರ ಕಚೇರಿ, ‘ಎ’ ಬ್ಲಾಕ್, 3ನೇ ತಿರುವು, ಗೋಪಾಲಗೌಡ ಬಡಾವಣೆ, ಶಿವಮೊಗ್ಗ-577205, ದೂ.ಸಂ.: 08182-251444 ಅಥವಾ ಇ-ಮೇಲ್ adtoursimsmg@gmail.com ಗೆ ದೂರ ನೀಡಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.