Independence day | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಾರಿದ ತ್ರಿವರ್ಣ ಧ್ವಜ, ಸೂಪರ್ ಮಹಿಳೆ ಕಾರ್ಯಕ್ರಮಕ್ಕೆ ಚಾಲನೆ, ಜಿಲ್ಲೆಯಲ್ಲಿ ಏನೇನು ವಿಶೇಷ?

Shimoga airport

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಜಿಲ್ಲೆಯಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಹಬ್ಬದಂತೆ ಆಚರಿಸಲಾಗಿದೆ. ಅದರಲ್ಲೂ ಶಿವಮೊಗ್ಗ ವಿಮಾನ ನಿಲ್ದಾಣ(shimoga airport)ದಲ್ಲಿ ಮೊದಲ ಸಲ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಈಸೂರಿ‌ನಲ್ಲಿ ಕಾರ್ಯಕ್ರಮ

EsuruSHIKARIPURA: ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಸ್ವಾತಂತ್ರ್ಯ ದಿನಾಚರಣೆ ಆಚರಿಸಿದರು.
ದೇಶ ಪ್ರೇಮದ ಭಾರತೀಯ ನಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆಗೆ ವಿಶೇಷ ಸ್ಥಾನವಿದೆ. ದೇಶದ ಮೊದಲ ಸ್ವತಂತ್ರ ನೆಲವಾಗಿದ್ದು, ನಮ್ಮ ಈಸೂರು ಗ್ರಾಮ. ಅಪೂರ್ವ ಕೆಚ್ಚೆದೆ-ಬಲಿದಾನದ ನೆಲ ಅದು ಎಂದು ರಾಘವೇಂದ್ರ ನೆನಪಿಸಿಕೊಂಡರು.

ವಿಮಾನ ನಿಲ್ದಾಣದಲ್ಲಿ ಇಂಡಿಪೆಂಡೆನ್ಸ್ ಡೇ

SHIMOGA: ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ‌ನ್ನು ಆಚರಣೆ ಮಾಡಲಾಯಿತು. ಬೆಳಗ್ಗೆ ಟರ್ಮಿನಲ್‌ ಮುಂಭಾಗದಲ್ಲಿರುವ ಧ್ವಜ ಸ್ತಂಭದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಯಿತು. ರಾಜ್ಯ ಕೈಗಾರಿಕ ಭದ್ರತಾ ಪಡೆ ಸಿಬ್ಬಂದಿ ಭಾಗವಹಿಸಿದ್ದರು.

READ | ಶಿವಮೊಗ್ಗದಲ್ಲಿನ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ನಿಮಗೆಷ್ಟು‌ ಗೊತ್ತು? ಶಿವಮೊಗ್ಗದ ಪ್ರಥಮ ಸ್ವಾತಂತ್ರ್ಯ ಸೇನಾನಿ ಯಾರು? ಎಷ್ಟು ಜನ ಗಲ್ಲಿಗೇರಿದ್ದರು?

ಪೊಲೀಸ್ ಇಲಾಖೆಯಿಂದ ರಂಗೋಲಿ ಹಬ್ಬ

Police 1SHIMOGA: 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಸ್.ಪಿ. ಮಿಥುನ್ ಕುಮಾರ್ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ದ್ವಜಾರೋಹಣವನ್ನು ಮಾಡಿದರು. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗೆ ಶುಭಾಷಯಗಳನ್ನು ತಿಳಿಸಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ನಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಆಯೋಜಿಸಿದ್ದ ‘ರಂಗೋಲಿ ಹಬ್ಬ’ ದಲ್ಲಿ ಆಕರ್ಷಕ ರಂಗೋಲಿಗಳನ್ನು ಬಿಡಿಸಿ ವಿಜೇತರಾದ ಮಹಿಳಾ ಸಿಬ್ಬಂದಿಗೆ ಪ್ರಶಸ್ತಿ ಮತ್ತು ಪ್ರಶಂಸನಾ ಪತ್ರವನ್ನು ನೀಡಿದರು. ಸಿಇಎನ್ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ದೀಪಕ್, ಸಿಬ್ಬಂದಿ ತಂಡವು ಸಿಇಐಆರ್ ಪೋರ್ಟಲ್ ಮುಖಾಂತರ ಪತ್ತೆ ಹಚ್ಚಿದ್ದ ಒಟ್ಟು 33 ಕಳೆದು ಹೋದ ಮೊಬೈಲ್ ಫೋನ್ ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದರು.

ಎನ್.ಇ.ಎಸ್.ನಲ್ಲಿ ಸ್ವಾತಂತ್ರ್ಯ ದಿ‌‌ನ

NESSHIMOGA: ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ವತಿಯಿಂದ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿದ್ದ 77 ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್ ಧ್ವಜಾರೋಹಣ ನೆರವೇರಿಸಿದರು.
ಸಮಿತಿ ಉಪಾಧ್ಯಕ್ಷ ಸಿ.ಆರ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಹೆಚ್.ಸಿ.ಶಿವಕುಮಾರ್, ಮಧುರಾವ್, ಎನ್.ಟಿ.ನಾರಾಯಣರಾವ್, ಎಂ.ಜಿ.ರಾಮಚಂದ್ರಮೂರ್ತಿ, ಅಜೀವ ಸದಸ್ಯರಾದ ಆನಂದ್, ಗುರುಪ್ರಸಾದ್, ಕಿಶೋರ ಶೀರನಾಳಿ, ಕುಲಸಚಿವರಾದ ಪ್ರೊ. ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ಮುಖ್ಯಸ್ಥರು ಉಪಸ್ಥಿತರಿದ್ದರು. 

ಮೈನ್ ಮಿಡ್ಲ್ ಸ್ಕೂಲ್ ನಲ್ಲಿ ಸ್ವಾತಂತ್ರೋತ್ಸವ

Govt schoolSHIMOGA: ನಗರದ ಬಿ.ಎಚ್. ರಸ್ತೆಯಲ್ಲಿ ಇರುವ ಮೈನ್ ಮಿಡ್ಲ್ ಸ್ಕೂಲ್ (ಸರ್ಕಾರಿ ಪ್ರಧಾನ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ) 77ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮವೂ ಬಹಳ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಮಕ್ಕಳು ದೇಶ ನಾಯಕರ ವೇಷಭೂಷಣ ಸಮವಸ್ತ್ರ ಧರಿಸಿ ಕೈಯಲ್ಲಿ ಭಾರತ ಮಾತೆಯ ಬಾವುಟಗಳು ಹಿಡಿದು ಬಂದು, ಭಾರತ್ ಮಾತಾ ಕೀ ಜೈ ಎಂಬ ಘೋಷವಾಕ್ಯ ಮೊಳಗಿಸಿದರು, ಮಕ್ಕಳೇ ಸ್ವಾಗತ, ನಿರೂಪಣೆ, ವಂದನಾರ್ಪಣೆ, ದೇಶ ಭಕ್ತಿ ಗೀತೆಗಳು ಹೇಳಿದರು.
ಮೈನ್ ಮಿಡ್ಲ್ ಸ್ಕೂಲ್ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಚನ್ನವೀರಪ್ಪ ಗಾಮನಗಟ್ಟಿ, ಹಳೇ ವಿದ್ಯಾರ್ಥಿಗಳಾದ ಶಿವಕುಮಾರ್, ಛಾಯಾ, ಮಂಜುಳಾ, ಭಾಗ್ಯಲಕ್ಷ್ಮಿ, ಶ್ರೀಮತಿ ಶಾಂತಾ, ಎಸ್ ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ್, ಸದಸ್ಯರಾದ ಶಂಕರಪ್ಪ, ನಗೀನಾ, ಶಾಲೆಯ ಕ್ಲಸ್ಟರ್ ಸಿ.ಆರ್.ಪಿ. ಯತೀಶ್, ಶಿಕ್ಷಕರಾದ ಪ್ರಕಾಶ್, ಕವಿತಾ, ಶಶಿವರ್ಣ ಉಪಸ್ಥಿತರಿದ್ದರು.

ಮಹಿಳೆಯರಿಂದ ಧ್ವಜಾರೋಹಣ

Super mahileSHIMOGA: ಸ್ವಾತಂತ್ರೋತ್ಸವ ದಿನಾಚರಣೆ ಸುಸಂದರ್ಭದಲ್ಲಿ ಮಹಿಳಾ ಸಬಲೀಕರಣದ ಧ್ಯೇಯೋದ್ದೇಶದೊಂದಿಗೆ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನಿಂದ ‘ಶಕ್ತಿ ಸೂಪರ್ ಸ್ತ್ರೀ’ (ಅದ್ಭುತ ಮಹಿಳೆ’) ಶೀರ್ಷಿಕೆ ಅಡಿಯಲ್ಲಿ ನಗರದ ಹರಿಗೆ ಬಡಾವಣೆಯ ಶ್ರೀ ಕಾಲಭೈರವೇಶ್ವರ ವೃದ್ಧಾಶ್ರಮದ ಆವರಣದಲ್ಲಿ ಮಹಿಳಾ ಪ್ರಮುಖರಾದ ಕೆ.ಲಕ್ಷ್ಮಿ, ಫರೀದಾ ಭಾನು, ರೇಣುಕಾ, ಲಕ್ಷ್ಮಿ, ಶೋಭಾ ಅವರುಗಳು ಧ್ವಜಾರೋಹಣ ಮಾಡಿ “ಅದ್ಭುತ ಮಹಿಳೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದ ನೇತೃತ್ವವನ್ನು ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಲೋಕೇಶ್ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ. ಗಿರೀಶ್, ಪದಾಧಿಕಾರಿಗಳಾದ ಎಸ್.ಕುಮಾರೇಶ್, ಎಂ. ರಾಹುಲ್, ರಾಕೇಶ್, ಪವನ್, ಮೋಹನ್, ಸಂತೋಷ್ ಇನ್ಶಾಲ್ , ನರಸಿಂಹ, ಗೌತಮ್ ಉಪಸ್ಥಿತರಿದ್ದರು.

ಹೊಸನಗರದಲ್ಲಿ ರಕ್ತದಾನ

Blood donationHOSANAGAR: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹೊಸನಗರ ಪೊಲೀಸ್ ಠಾಣೆ ಪಿಎಸ್ಐ ಶಿವಾನಂದ ಕೋಳಿ ನೇತೃತ್ವದಲ್ಲಿ ಜೆಸಿಐ ಘಟಕ, ಮೆಗ್ಗಾನ್ ರಕ್ತನಿಧಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಚರಿಸಲಾಯಿತು. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ, ಸಾರ್ವಜನಿಕರು ಸೇರಿದಂತೆ ಒಟ್ಟು 79 ಜನ ರಕ್ತದಾನ ಮಾಡಿರುತ್ತಾರೆ.

Independence day | ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ‌ ಪ್ರಮುಖ 10 ಸಂದೇಶಗಳಿವು

error: Content is protected !!