ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಸ್ನೇಹಲ್ ಸುಧಾಕರ್ ಲೋಖಂಡೆ (Snehal Sudhakar Lokhande) ಅವರನ್ನು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ)ರಾಗಿ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.
READ | ಪ್ರಾಜೆಕ್ಟ್ ಮ್ಯಾನೇಜರ್ ಬಳಿಯೇ ಹಣ ಕಳವು ಮಾಡಿದ ಕಾರು ಚಾಲಕ ಅರೆಸ್ಟ್, ₹7 ಲಕ್ಷ ಸೀಜ್
ಇದು ಹೆಚ್ಚುವರಿ ಜವಾಬ್ದಾರಿಯಾಗಿದ್ದು, ಜಿ.ಪಂ ಸಿಇಒ ಆಗಿ ಮುಂದುವರೆಯಲಿದ್ದಾರೆ. ಮಂಗಳವಾರ ಮಧ್ಯಾಹ್ನ ವಿಶ್ವವಿದ್ಯಾಲಯಕ್ಕೆ ಆಗಮಿಸಿ ಕುಲಸಚಿವರಾಗಿ ಅಧಿಕಾರ ವಹಿಸಿಕೊಂಡರು.
ಜು.28ರಂದು ವಿಶ್ವವಿದ್ಯಾಲಯದ ನೂತನ ಕುಲಸಚಿವ (ಆಡಳಿತ)ರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ವಹಿಸಿಕೊಂಡಿದ್ದರು. ಮೂಲತಃ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಇಂಗ್ಲಿಷ್ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾಗಿರುವ ಇವರು, ಈ ಹಿಂದೆ ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾಗಿ ಸೇವೆ ಸಲ್ಲಿಸಿದ್ದರು. ಈಗ ಐಎಎಸ್ ಅಧಿಕಾರಿಯನ್ನು ನೇಮಿಸಲಾಗಿದೆ.