ಸುದ್ದಿ ಕಣಜ.ಕಾಂ ಶಿಕಾರಿಪುರ
SHIKARIPURA: ಪಟ್ಟಣದ ಕೆಎಚ್ಬಿ ಲೇಔಟ್ನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಯುವಕನಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ.
READ | ಹೊಳೆಹೊನ್ನೂರಿನಲ್ಲಿ ಗಾಂಧಿ ಪ್ರತಿಮೆ ಧ್ವಂಸ, ಇದುವರೆಗಿನ ಬೆಳವಣಿಗೆಗಳೇನು?
ಈದ್ ಮಿಲಾದ್ ಹಬ್ಬ (Eid Milad Festival) ಆಚರಣೆಯ ಸಮಿತಿಯನ್ನು ರಚನೆ ಮಾಡುವುದಕ್ಕಾಗಿ ಕರೆಯಲಾಗಿದ್ದ ಸಭೆಯಲ್ಲಿ ಎರಡು ಗುಂಪುಗಳ ನಡುವೆ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದು, ಜಾಫರ್ (32) ಎಂಬಾತ ಮೃತಪಟ್ಟಿದ್ದಾನೆ.
ಈ ಘಟನೆಯಿಂದ ಕೆಲಹೊತ್ತು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ಹಿಡಿತಕ್ಕೆ ತಂದಿದ್ದಾರೆ ಎಂದು ತಿಳಿದುಬಂದಿದೆ.
ಅಧಿಕಾರಿಗಳ ದೌಡು
ಘಟನಾ ಸ್ಥಳಕ್ಕೆ ಶಿಕಾರಿಪುರ ಡಿವೈಎಸ್ಪಿ ಶಿವಾನಂದ್ ಮದರಕಂಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ಕುಮಾರ್ ಭೂಮರಡ್ಡಿ, ಎಸ್.ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಪಟ್ಟಣದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.