ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆ.15ರಿಂದ ‘ನಂದಿನಿ ಸಿಹಿ ಉತ್ಸವ’ (Nandini Sihi Utsava) ಆಯೋಜಿಸಲಾಗಿದೆ ಎಂದು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ (SHIMUL) ವ್ಯವಸ್ಥಾಪಕ ನಿರ್ದೇಶಕ (MD) ಎಸ್.ಜಿ.ಶೇಖರ್ ತಿಳಿಸಿದ್ದಾರೆ.
ಒಕ್ಕೂಟದ ಮಾರುಕಟ್ಟೆ ವ್ಯಾಪ್ತಿಯ ಶಿವಮೊಗ್ಗ(Shimoga), ದಾವಣಗೆರೆ (Davanagere) ಮತ್ತು ಚಿತ್ರದುರ್ಗ (Chitradurga) ಜಿಲ್ಲೆಗಳಲ್ಲಿ ಗ್ರಾಹಕರಿಗೆ ನಂದಿನಿ ಹಾಲಿನಿಂದ ತಯಾರಿಸಿದ ಉತ್ಪನ್ನಗಳನ್ನು ಗ್ರಾಹಕರಿಗೆ ಅನುಕೂಲವಾಗುವಂತೆ ಶೇ.20 ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲು ‘ನಂದಿನಿ ಸಿಹಿ ಉತ್ಸವ’ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಉತ್ಸವದ ಅವಧಿಯಲ್ಲಿ ಎಲ್ಲ ನಂದಿನಿ ಸಿಹಿ ಉತ್ಪನ್ನಗಳ ಗರಿಷ್ಠ ಮಾರಾಟ ಬೆಲೆಯ (MRP) ಮೇಲೆ ಈ ರಿಯಾಯಿತಿಯನ್ನು ನೀಡಲಾಗುವುದು.
ಸಿಹಿ ಉತ್ಪನ್ನ ಮಾರಾಟ ಹೆಚ್ಚಿಸಲು ಉತ್ಸವ
ಪ್ರತಿ ವರ್ಷದಂತೆ ಈ ವರ್ಷವೂ ಸಹ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ಹಾಗೂ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಸಹಯೋಗದೊಂದಿಗೆ ನಂದಿನಿ ಸಿಹಿ ಉತ್ಪನ್ನಗಳನ್ನು ಹೆಚ್ಚಿನ ಸಂಖ್ಯೆಯ ಜನತೆಗೆ ಪರಿಚಯಿಸಿ, ನಂದಿನಿ ಸಿಹಿ ಉತ್ಪನ್ನಗಳ ಮಾರಾಟವನ್ನು ಹೆಚ್ಚಿಸಲು ಈ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಶಿಮುಲ್ ಅಧ್ಯಕ್ಷರಿಂದ ಚಾಲನೆ
‘ನಂದಿನಿ ಸಿಹಿ ಉತ್ಸವ’ವನ್ನು ಒಕ್ಕೂಟದ ಅಧ್ಯಕ್ಷ ಎನ್.ಎಚ್. ಶ್ರೀಪಾದರಾವ್ (Shimul President Shripadrao) ಅವರು ನಗರದ ಜಿಲ್ಲಾ ಪಂಚಾಯಿತಿ ಮಿಲ್ಕ್ ಪಾರ್ಲರ್ನಲ್ಲಿ ಚಾಲನೆ ನೀಡಿದರು. ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರಾದ ಡಿ.ಆನಂದ್, ದಿನೇಶ್, ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್ ಉಪಸ್ಥಿತರಿದ್ದರು.
READ | ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆ! ಮುಂದೇನಾಯ್ತು?
ಶಿಮುಲ್ ಬಗ್ಗೆ ತಿಳಿಯಬೇಕಾದ ವಿಚಾರಗಳಿವು
ಒಕ್ಕೂಟವು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಕಾರ್ಯ ವ್ಯಾಪ್ತಿಯನ್ನು ಹೊಂದಿದ್ದು, ಕಾರ್ಯವ್ಯಾಪ್ತಿಯ ಜಿಲ್ಲೆಗಳ 1253 ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಪ್ರತಿನಿತ್ಯ 2 ಸರತಿಗಳಲ್ಲಿ ಸರಾಸರಿ ಒಟ್ಟು 6.50 ಲಕ್ಷ ಕೆ.ಜಿ ಹಾಲನ್ನು ಸಂಗ್ರಹಿಸಲಾಗುತ್ತಿದೆ.
ಸದರಿ ಹಾಲನ್ನು ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಡೇರಿ ಘಟಕಗಳಲ್ಲಿ ಸಂಸ್ಕರಿಸಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ.
ಒಕ್ಕೂಟದ ವ್ಯಾಪ್ತಿಯಲ್ಲಿರುವ 1,750 ಹಾಲಿನ ಡೀಲರ್ದಾರರು, 114 ಫ್ರಾಂಚೈಸಿ ಪಾರ್ಲರ್ದಾರರು ಹಾಗೂ 48 ಒಕ್ಕೂಟದ ಸ್ವಂತ ಮಿಲ್ಕ್ ಪಾರ್ಲರ್ಗಳ ಮೂಲಕ ಪ್ರತಿನಿತ್ಯ 2.70 ಲಕ್ಷ ಲೀಟರ್ ಹಾಲು ಮತ್ತು ಸರಾಸರಿ 55 ಸಾವಿರ ಕೆ.ಜಿ. ಮೊಸರನ್ನು ಮಾರಾಟ ಮಾಡಲಾಗುತ್ತಿದೆ. ಇದರೊಂದಿಗೆ ವಿವಿಧ ನಂದಿನಿ ಹಾಲಿನ ಉತ್ಪನ್ನಗಳನ್ನು ಹಾಗೂ ನಂದಿನಿ ಸಿಹಿ ತಿನಿಸುಗಳನ್ನೂ ಕೂಡ ಮಾರಾಟ ಮಾಡಲಾಗುತ್ತಿದೆ.
One click many news | ಸ್ವಾತಂತ್ರ್ಯ ದಿನದಂದೂ ಸಿಂಹ ಧಾಮ ಓಪನ್, ಆನ್ಲೈನ್ ಅರ್ಜಿ ಆಹ್ವಾನ, ಮೆಸ್ಕಾಂ ಸಭೆ