Police raid | ಶಿವಮೊಗ್ಗ, ಭದ್ರಾವತಿಯಲ್ಲಿ ಪೊಲೀಸರ ದಿಢೀರ್ ಕಾರ್ಯಾಚರಣೆ, 105 ಜನರ ವಿರುದ್ಧ ಕೇಸ್, ಕಾರಣವೇನು?

police

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಮತ್ತು ಭದ್ರಾವತಿ (Bhadravathi) ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಗುರುವಾರ ಕಾರ್ಯಾಚರಣೆ ನಡೆಸಿರುವ ಪೊಲೀಸರು 105 ಲಘು ಪ್ರಕರಣ ಮತ್ತು ಐದು ಜನರ ವಿರುದ್ಧ ಎನ್.ಡಿಪಿಎಸ್‌ ಕಾಯ್ದೆ ಅಡಿ‌‌ ಪ್ರಕರಣ ದಾಖಲಿಸಿದ್ದಾರೆ.

READ | ಕೆಪಿಎಸ್.ಸಿಯಿಂದ ಪರೀಕ್ಷೆ, ಪರೀಕ್ಷಾರ್ಥಗಳು ಗಮನಿಸಬೇಕಾದ ವಿಚಾರಗಳಿವು

ಪೊಲೀಸ್ ನಿರೀಕ್ಷಕರು, ಪೋಲಿಸ್ ಉಪ ನಿರೀಕ್ಷಕರು ಮತ್ತು ಸಿಬ್ಬಂದಿ ತಂಡವು ಆಯಾ ಠಾಣಾ ವ್ಯಾಪ್ತಿಯ ಹೊರವಲಯ ಮತ್ತು ಖಾಲಿ ಸ್ಥಳಗಳಲ್ಲಿ Area Domination ವಿಶೇಷ ಗಸ್ತು ಮಾಡಿ Public Nuisance ಮಾಡುವ ಮತ್ತು ಅನುಮಾನಸ್ಪಾದ ವ್ಯಕ್ತಿಗಳನ್ನು ಠಾಣೆಗೆ ಕರೆತಂದು, ಅವರುಗಳ ಪೂರ್ವಾಪರಗಳನ್ನು ಪರಿಶೀಲಿಸಿದರು. ಅದರಲ್ಲಿ Public Nuisance ಮಾಡಿದ ವ್ಯಕ್ತಿಗಳ ವಿರುದ್ದ ಒಟ್ಟು 105 ಲಘು ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ. ಗಾಂಜಾ ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ 5 ಜನರ ವಿರುದ್ಧ NDPS ಕಾಯ್ದೆ ಅಡಿಯಲ್ಲಿ ಒಟ್ಟು 5 ಪ್ರಕರಣಗಳನ್ನು ದಾಖಲಿಸಲಾಗಿದೆ.

error: Content is protected !!