Good News | 9, 10ನೇ ಮಕ್ಕಳಿಗೂ ಬೇಯಿಸಿದ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ

egg bannana and chikki

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ನಿವಾರಣೆಗಾಗಿ ಜಾರಿಗೆ ತರಲಾಗಿರುವ ಪಿ.ಎಂ.ಪೋಷಣ್ (pm poshan scheme) ಮಧ್ಯಾಹ್ನ ಉಪಹಾರ ಯೋಜನೆಯಡಿ 9 ಮತ್ತು 10 ನೇ ತರಗತಿ ಮಕ್ಕಳಿಗೂ ಬೇಯಿಸಿದ ಮೊಟ್ಟೆ, ಮೊಟ್ಟೆ ಸೇವಿಸದವರಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ಇಂದಿನಿಂದ ವಿತರಿಸಲಾಗುತ್ತಿದೆ ಎಂದು ಜಿ.ಪಂ.ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು.

food
ಪಿಳ್ಳಂಗಿರಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಈ ಯೋಜನೆಗೆ ಜಿಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಚಾಲನೆ ನೀಡಿದರು.

ಪಿಳ್ಳಂಗಿರಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಈ ಯೋಜನೆಗೆ ಚಾಲನೆ ನೀಡಿ, ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಟ್ಟೆ/ ಬಾಳೆಹಣ್ಣು/ ಶೇಂಗಾ ಚಿಕ್ಕಿಯನ್ನು ವಿತರಣೆ ಮಾಡಿ ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 159507 ವಿದ್ಯಾರ್ಥಿಗಳಿದ್ದು ವಾರ್ಷಿಕವಾಗಿ ₹7.65 ಕೋಟಿ ಅನುದಾದ ಈ ಯೋಜನೆಯಡಿ ನಿಗದಿಯಾಗಿದೆ. ಪಿಳ್ಳಂಗಿರಿ ಪ್ರೌಢಶಾಲೆಯಲ್ಲಿ ಹಾಜರಿದ್ದ 254 ಮಕ್ಕಳ ಪೈಕಿ 224 ಮಕ್ಕಳು ಮೊಟ್ಟೆ, 29 ಮಕ್ಕಳು ಶೇಂಗಾ ಚಿಕ್ಕಿ ಮತ್ತು 01 ಮಗು ಬಾಳೆ ಹಣ್ಣನ್ನು ಸೇವಿಸಿದರು.
ಸಿ.ಆರ್.ಪರಮೇಶ್ವರಪ್ಪ, ಡಿಡಿಪಿಐ

ಈ ಹಿಂದೆ 1 ರಿಂದ 8 ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವನ್ನು ವಾರದಲ್ಲಿ ಒಂದು ದಿನ ಮೊಟ್ಟೆ, ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ವಾರ್ಷಿಕ ಒಟ್ಟು 46 ದಿನಗಳ ಕಾಲ ವಿತರಿಸಲಾಗಿತ್ತು.

READ | ಮಲೆನಾಡಿನಲ್ಲಿ ಕಣ್ಮರೆಯಾದ ಮಳೆ, ಮಳೆಗಾಲದಲ್ಲೂ ಬಿಸಿಲು ಶಕೆ,  ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

9 ಮತ್ತು 10 ನೇ ತರಗತಿ ಮಕ್ಕಳಿಗೂ ಕೂಡ ಪೌಷ್ಟಿಕಾಂಶವುಳ್ಳ ಪೂರಕ ಆಹಾರವನ್ನು ನೀಡಬೇಕಂದು ನಿರ್ಧರಿಸಿ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಈ ಮಕ್ಕಳಿಗೂ ಈ ಯೋಜನೆಯನ್ನು ವಿಸ್ತರಿಸಿದೆ. ಮಕ್ಕಳಿಗೆ ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳಿಗೆ ಪೌಷ್ಟಿಕಾಂಶ ಆಹಾರ ಅಗತ್ಯವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ವೃದ್ದಿಸುವಲ್ಲಿ ಇದು ಸಹಕಾರಿಯಾಗಿದೆ. ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಇದು ಸಹಕರಿಸುತ್ತದೆ. ವಿದ್ಯಾರ್ಥಿಗಳ ಇದರ ಸದುಪಯೋಗ ಪಡೆದು ಉತ್ತಮ ವಿದ್ಯಾಭ್ಯಾಸ ಪಡೆದು ಉತ್ತಮ ನಾಗರೀಕರಾಗಬೇಕೆಂದು ಹಾರೈಸಿದರು.
ಬಿಇಓ ನಾಗರಾಜ್, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ದಾದಾಪೀರ್, ಪ್ರಾಥಮಿಕ ಮತ್ತು ಪ್ರೌಢಶಾಲಾ ಎಸ್‍ಡಿಎಂಸಿ ಅಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯಿನಿ ವಿಶಾಲಾಕ್ಷಿ, ಸಹ ಶಿಕ್ಷಕರು, ಶಿಕ್ಷಣ ಸಂಯೋಜನಾಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

AITA Code | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ದೊರಕಿತು ಐಎಟಿಎ ಕೋಡ್, ಏನಿದು, ಪ್ರಯೋಜನಗಳೇನು?

 

error: Content is protected !!