Para medical | ತಾತ್ಕಾಲಿಕ ಅರೆ ವೈದ್ಯಕೀಯ ರೋಸ್ಟರ್ ಆಯ್ಕೆ ಪಟ್ಟಿ ಪ್ರಕಟ, ಆಕ್ಷೇಪಣೆಗೆ ಕೊನೆ ದಿನಾಂಕ ಯಾವುದು?

IMG 20220517 232257 102

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಷ್ಟ್ರೀಯ ಆರೋಗ್ಯ ಅಭಿಯಾನಯಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿಯಿರುವ ಅರೆ ವೈದ್ಯಕೀಯ (ಶೂಶ್ರೂಷಕಿಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ತಾಲೂಕು ಆಶಾ ಮೇಲ್ವಿಚಾರಕರು, ನೇತ್ರ ಸಹಾಯಕರು) ಹುದ್ದೆಗಳನ್ನು ಭರ್ತಿ ಮಾಡಲು ದಾಖಲಾತಿ ಪರಿಶೀಲನೆಗೆ ಭಾಗವಹಿಸಿದ್ದ ಅಭ್ಯರ್ಥಿಗಳ ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ಪಟ್ಟಿಗೆ ಅಭ್ಯರ್ಥಿಗಳ ಆಕ್ಷೇಪಣೆ ಇದ್ದಲ್ಲಿ ಲಿಖಿತ ರೂಪದಲ್ಲಿ ಆ.30 ರೊಳಗಾಗಿ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಎನ್.ಎಚ್.ಎಂ. ವಿಭಾಗಕ್ಕೆ ಸಲ್ಲಿಸುವಂತೆ ಜಿಲ್ಲಾ ಆರೋಗ್ಯ ಸಂಘದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Gandhi statue | ಹೊಳೆಹೊನ್ನೂರಿನಲ್ಲಿ ಗಾಂಧಿ ಪ್ರತಿಮೆ ಧ್ವಂಸ, ಇದುವರೆಗಿನ ಬೆಳವಣಿಗೆಗಳೇನು?

error: Content is protected !!