Shimoga Airport | ಶಿವಮೊಗ್ಗ ವಿಮಾನ ನಿಲ್ದಾಣದ ಬಗ್ಗೆ ರಾಜ್ಯ ಸರ್ಕಾರ ಪ್ರಮುಖ ಘೋಷಣೆ, ಏನದು?

Shivamogga Airport

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ

SHIVAMOGGA: ಮುಂದಿನ ಒಂದು ವರ್ಷ ಕಾಲ ಶಿವಮೊಗ್ಗ- ಬೆಂಗಳೂರು (shimoga- bangaluru flight) ನಡುವೆ ಪ್ರಯಾಣಿಸುವ ಪ್ರತಿಯೊಬ್ಬರ ಟಿಕೆಟ್ ಮೇಲೆ ₹500 ರಾಜ್ಯ ಸರ್ಕಾರ (karnataka Government) ಸಬ್ಸಿಡಿ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ದಿ ಸಚಿವ ಎಂ.ಬಿ.ಪಾಟೀಲ್ (M.B.Patil) ಘೋಷಿಸಿದರು.

VIDEO REPORT | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಫ್ಲೈಟ್ ಲ್ಯಾಂಡ್ ಆಗಿದ್ದೇ ಮೈಪುಳಕವಾಗಿದೆ. ಹೇಗಿತ್ತು ಲ್ಯಾಂಡಿಂಗ್ ದೃಶ್ಯ? ವಿಡಿಯೋ ವೀಕ್ಷಿಸಿ

ಸೋಗಾನೆಯ (Sogane) ವಿಮಾನ ನಿಲ್ದಾಣದಲ್ಲಿ (shimoga airport) ವಾಣಿಜ್ಯ ವಿಮಾನಯಾನ ಕಾರ್ಯಾಚರಣೆ ಮತ್ತು ಅಧಿಕೃತ ಜಾಲತಾಣವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

READ | ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ? ಸೌಲಭ್ಯ ಪಡೆಯಲು ಯಾರು ಅರ್ಹರು? ಇಲ್ಲಿದೆ ಯೋಜನೆಯ ಪೂರ್ಣ ಮಾಹಿತಿ

ವಿಮಾನಯಾನ ಆರಂಭದಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ದಿಯ ವಿನೂತನ ಅಧ್ಯಾಯ ಆರಂಭವಾಗಿದೆ. ಇದು ರಾಜ್ಯದ ಮಲೆನಾಡು (Malnad) ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣವಾಗಿದ್ದು ₹450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ. “ರಸಋಷಿ ಕುವೆಂಪು” (Kuvempu Airport name) ಅವರ ಹೆಸರನ್ನು ಹೊರಲಿರುವ ಈ ವಿಮಾನ ನಿಲ್ದಾಣದಿಂದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ. ಈ ಮೂಲಕ ಮಲೆನಾಡು ಮತ್ತು ಮಧ್ಯಮ ಕರ್ನಾಟಕದ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಆಗಲಿದೆ ಎಂದರು.

shimoga airport program
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ.

ವಿಮಾನ ನಿಲ್ದಾಣಕ್ಕಾಗಿ ಶ್ರಮಿಸಿದ ಎಲ್ಲ ಜನಪ್ರತಿನಿಧಿಗಳು ಮತ್ತು ಭೂಮಿ ನೀಡಿದ ರೈತರಿಗೆ ಧನ್ಯವಾದಗಳು. ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ, ಕೈಗಾರಿಕೆಗಳಿಗೆ ನೆರವು ಸೇರಿದಂತೆ ಜಿಲ್ಲೆಯ ಅಭಿವೃದ್ದಿಗೆ ಸಹಕರಿಸಲಾಗುವುದು. ಜನಸಾಮಾನ್ಯರು, ಬಡವರು ವಿಮಾನ ನಿಲ್ದಾಣದಲ್ಲಿ ಹಾರಾಡುವ ವ್ಯವಸ್ಥೆ ಮಾಡುತ್ತೇವೆಂಬ ವಿಶ್ವಾಸ ಇದೆ ಎಂದ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಜಿಲ್ಲೆಯಲ್ಲಿ ಕೈಗಾರಿಕೆಗೆ ಹೆಚ್ಚಿನ ಸಹಕಾರ ನೀಡಲಿದ್ದಾರೆ.
ಎಸ್.ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ

ಶಿವಮೊಗ್ಗಕ್ಕೆ ಲೋಹದ ಹಕ್ಕಿಯ ಆಗಮನ ಆಗಿದೆ. ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಹಾಗೂ ಭೂಮಿ ನೀಡಿದ ರೈತರಿಗೆ ಧನ್ಯವಾದಗಳು.
ಬಿ.ವೈ.ರಾಘವೇಂದ್ರ, ಸಂಸದ

ಶಿವಮೊಗ್ಗ ಜಿಲ್ಲೆಯ ಬಹು ವರ್ಷಗಳ ವಿಮಾನ ನಿಲ್ದಾಣದ ಕನಸು ನಿಮ್ಮೆಲ್ಲರ ಬೆಂಬಲದಿಂದ ನನಸಾಗಿದೆ. ಕೈಗಾರಿಕೆ ಬೆಳವಣಿಗೆ, ಉದ್ಯೋಗ ಸೃಷ್ಟಿಗೆ ಉತ್ತಮ ಅವಕಾಶಗಳು ತೆರೆದುಕೊಳ್ಳಲಿವೆ. ನಿಲ್ದಾಣದಲ್ಲಿ ರಾತ್ರಿ ನಿಲ್ದಾಣಕ್ಕೂ ವ್ಯವಸ್ಥೆ ಆಗುತ್ತಿದ್ದು ಕೆಲವೇ ವರ್ಷಗಳಲ್ಲಿ ಈ ನಿಲ್ದಾಣ ಅಂತರರಾಷ್ಟ್ರೀಯ ನಿಲ್ದಾಣ ಆಗುವುದರಲ್ಲಿ ಅನುಮಾನವಿಲ್ಲ.
ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

ಎಂ.ಬಿ.ಪಾಟೀಲ್ ಹೇಳಿದ್ದೇನು?

  • 779 ಎಕರೆ ವಿಸ್ತಾರದಲ್ಲಿ ನಿರ್ಮಿಸಿರುವ ವಿಮಾನ ನಿಲ್ದಾಣದಲ್ಲಿ ಮೂಲಯೋಜನೆಯ ವಿನ್ಯಾಸವನ್ನು ಪರಿಷ್ಕರಿಸಿ, ಏರ್‍ಬಸ್-320 ಮಾದರಿಯ ವಿಮಾನಗಳು ಕೂಡ ಬಂದಿಳಿಯುವ ಮತ್ತು ರಾತ್ರಿ ವೇಳೆ ಇಳಿಯುವ ಸೌಲಭ್ಯಗಳನ್ನು ಕೂಡ ಕಲ್ಪಿಸಲಾಗುತ್ತಿದೆ.
  • ಸದ್ಯಕ್ಕೆ ಇಲ್ಲಿಂದ ಬೆಂಗಳೂರಿಗೆ ಕನೆಕ್ಟಿಂಗ್ ವಿಮಾನಯಾನ ಸೇವೆ ಲಭ್ಯವಾಗಲಿದೆ. ಬೆಂಗಳೂರಿನಿಂದ ಚೆನ್ನೈ, ಮುಂಬೈ ಮತ್ತು ದೆಹಲಿಗೆ ತೆರಳಲಿರುವ ಇಂಡಿಗೋ (Indigo) ಸಂಸ್ಥೆಯ ವಿಮಾನಗಳ ಮೂಲಕ ಪ್ರಯಾಣವನ್ನು ಮುಂದುವರಿಸಬಹುದು.
  • ಉಡಾನ್ ಯೋಜನೆಯಡಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಸದ್ಯದಲ್ಲೇ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ದೆಹಲಿ, ಹೈದರಾಬಾದ್ ಸೇರಿದಂತೆ ದೇಶದ ನಾನಾ ನಗರಗಳಿಗೆ ಇಲ್ಲಿಂದ ನೇರ ವಿಮಾನಯಾನ ಆರಂಭಿಸಲಾಗುವುದು.
  • ರಾಜ್ಯ ಸರ್ಕಾರದಿಂದಲೇ ವಿಮಾನ ನಿಲ್ದಾಣ ನಿರ್ವಹಣೆ ಮಾಡುವ ಯೋಜನೆಯಿದ್ದು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಪ್ರಥಮವಾಗಿ ನಿರ್ವಹಣೆ ಆರಂಭವಾಗಲಿದೆ. ಇದರಿಂದ ಸರ್ಕಾರಕ್ಕೆ ಆದಾಯ ಮತ್ತು ಆಸ್ತಿ ಉಳಿಯಲಿದೆ. ಈ ಕುರಿತು ಸಾಧಕ-ಬಾಧಕಗಳನ್ನು ತಿಳಿದು ಮುನ್ನಡೆಯುತ್ತೇವೆ.
  • ರಸ್ತೆ-ರೈಲ್ವೆ-ಏರ್‍ ವೇ ಇಂದ ಆರ್ಥಿಕ, ಔದ್ಯೋಗಿಕ ಬೆಳವಣಿಗೆ ಸಾಧ್ಯವಾಗಿದ್ದು, ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿ ರೈತರ ಸಹಕಾರದೊಂದಿಗೆ ಕೈಗಾರಿಕೆಗಳನ್ನು ತರುವ ಉದ್ದೇಶ ಇದೆ.

VIDEO REPORT | ಚೊಚ್ಚಲ ಜರ್ನಿ‌ ಹೇಗಿತ್ತು? ಯಾರ‌್ಯಾರು ಬಂದರು, ವಿಡಿಯೋ ವೀಕ್ಷಿಸಿ

READ | ಶಿವಮೊಗ್ಗದಿಂದ ಹೊರಡುವ ವಿಮಾನಗಳ ವೇಳಾಪಟ್ಟಿ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ.ಪಾಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಆರಗ ಜ್ಞಾನೇಂದ್ರ ಮುಂತಾದ ಗಣ್ಯರೊಂದಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 9.50ಕ್ಕೆ ಹೊರಟ ಚೊಚ್ಚಲ ವಿಮಾನವು 11.5ಕ್ಕೆ ಶಿವಮೊಗ್ಗಕ್ಕೆ ಬಂದಿಳಿಯುವುದರೊಂದಿಗೆ ಮಲೆನಾಡಿನಲ್ಲಿ ವಿಮಾನಯಾನದ ಹೊಸ ಅಧ್ಯಾಯ ಆರಂಭವಾಯಿತು.

shimoga airport 1
ಮೊದಲ ವಿಮಾನಕ್ಕೆ ವಾಟರ್ ಸೆಲ್ಯೂಟ್

ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ವಾಟರ್ ಸೆಲ್ಯೂಟ್ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ಜೊತೆಗೆ ಬಂದಿಳಿದ ಎಲ್ಲ ಪ್ರಯಾಣಿಕರಿಗೂ ಸಚಿವ ಮಧು ಬಂಗಾರಪ್ಪ ಅವರಲ್ಲದೆ ವಿಮಾನ ನಿಲ್ದಾಣದ ಸಿಬ್ಬಂದಿ ಗುಲಾಬಿ ಹೂವು ಮತ್ತು ಸಿಹಿ ನೀಡಿ ಸ್ವಾಗತಿಸಿದರು.
ವಾಪಸ್ ಬೆಂಗಳೂರಿಗೆ ಹೊರಟ ವಿಮಾನದಲ್ಲಿ ಸಚಿವ ಎಂ.ಬಿ.ಪಾಟೀಲ್ ಜತೆ ಸಚಿವ ಮಧು ಬಂಗಾರಪ್ಪ ಕೂಡ ಪ್ರಯಾಣಿಸಿದರು.
ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ನೀಡಿದ ರೈತರ ಪರವಾಗಿ ಇಬ್ಬರು ರೈತರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.
ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಗೋಪಾಲಕೃಷ್ಣ ಬೇಳೂರು, ಆರಗ ಜ್ಞಾನೇಂದ್ರ, ಶಾರದಾ ಪೂರ್ಯಾನಾಯ್ಕ, ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡ, ಡಿ.ಎಸ್.ಅರುಣ್, ಭಾರತಿ ಶೆಟ್ಟಿ ಮಾಜಿ ಶಾಸಕರಾದ ಕೆ.ಎಸ್.ಈಶ್ವರಪ್ಪ, ಮೂಲಸೌಕರ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ಕೆಎಸ್‍ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ಆರ್.ರವಿ, ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ್, ವಿಮಾನ ನಿಲ್ದಾಣದ ನಿರ್ದೇಶಕ ಕ್ಯಾ.ಶಮಂತ್, ಡಿಎಸ್‍ಪಿ ಚಂದ್ರಶೇಖರ್ ಉಪಸ್ಥಿತರಿದ್ದರು.

Smart Traffic | ಹೊಸ ತಂತ್ರಜ್ಞಾನದಿಂದ ಮೊದಲ ದಿನವೇ ಟ್ರಾಫಿಕ್ ನಿಯಮ ಉಲ್ಲಂಘನೆಯ ಭರ್ಜರಿ ಕೇಸ್, ದಾಖಲಾದ ಕೇಸ್ ಗಳೆಷ್ಟು?

error: Content is protected !!