ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ತ್ಯಾವರೆಕೊಪ್ಪದ ಹುಲಿ- ಸಿಂಹ ಧಾಮ (Tyavarekoppa tiger and lion safari) ತೆರೆದಿರುತ್ತದೆ. ವಿದ್ಯಾರ್ಥಿಗಳು, ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮೃಗಾಲಯ ಹಾಗೂ ಸಫಾರಿ ವೀಕ್ಷಿಸುವಂತೆ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿರುತ್ತಾರೆ.
READ | ಪೆಟ್ರೋಲ್ ಥೆಫ್ಟ್ ಗ್ಯಾಂಗ್ ಅರೆಸ್ಟ್, ಪಬ್ಲಿಕ್ ಪ್ಲೇಸ್ ನಲ್ಲೇ ಗಾಂಜಾ ಮಾರಾಟ
ಮೆಸ್ಕಾಂ ಜನ ಸಂಪರ್ಕ ಸಭೆ ನಾಳೆ
SHIMOGA: ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಆ.16 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಕಚೇರಿ, ಪಾಲನೆ ಮತ್ತು ನಿರ್ವಹಣೆ ಗ್ರಾ.ಉ.ವಿ., ಬಾಲರಾಜ್ ಅರಸ್ ರಸ್ತೆ, ರೈಲ್ವೆ ನಿಲ್ದಾಣದ ಹತ್ತಿರ, ಮಂ.ವಿ.ಸ.ಕಂ. ಶಿವಮೊಗ್ಗ ಇಲ್ಲಿ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂ.:08182-220864 ನ್ನು ಸಂಪರ್ಕಿಸುವುದು.
READ | ರಾತ್ರೋರಾತ್ರಿ ರೆಸಾರ್ಟ್ ಮೇಲೆ ಪೊಲೀಸರ ದಾಳಿ, ಡಬಲ್ ಬ್ಯಾರಲ್ ಬಂದೂಕು ಸೇರಿ ಅಮೂಲ್ಯ ವಸ್ತುಗಳ ಸೀಜ್
ಆನ್ಲೈನ್ ಅರ್ಜಿ ಆಹ್ವಾನ
SHIMOGA: ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2023-24ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡಾವಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ, ವೃತ್ತಿಪರ/ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಮತ್ತು ಬಡ್ಡಿ ಸಹಾಯಧನ ಸೌಲಭ್ಯ ನೀಡಲು ಆಸಕ್ತ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಇಲಾಖೆಯ https://shimoga.nic.in ಪೊರ್ಟಲ್ ಮೂಲಕ ಸೆಪ್ಟೆಂಬರ್ 15ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-223376, ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9380561275, ಸೊರಬ, ಶಿಕಾರಿಪುರ, ಹೊಸನಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9481743640 ಹಾಗೂ ಸಾಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9448401714 ಗಳನ್ನು ಸಂಪರ್ಕಿಸುವುದು.