ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸೆ.24ರಂದು ನಗರದ ರಾಗಿಗುಡ್ಡದಲ್ಲಿ ನಡೆಯುವ ಗಣಪತಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಬಂದೋಬಸ್ತ್ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಎಷ್ಟು ಸಿಬ್ಬಂದಿ ನಿಯೋಜನೆ?
4 ಪೊಲೀಸ್ ಉಪಾಧೀಕ್ಷಕರು, 9 ಪೋಲಿಸ್ ನಿರೀಕ್ಷಕರು, 15 ಪೊಲೀಸ್ ಉಪನಿರೀಕ್ಷಕರು, 31 ಸಹಾಯಕ ಪೊಲೀಸ್ ನಿರೀಕ್ಷಕರು, 189 ಪೊಲೀಸ್ ಹೆಡ್ ಕಾನ್ಸ್ ಟೆಬಲ್ ಮತ್ತು ಪೊಲೀಸ್ ಕಾನ್ಸ್ ಟೆಬಲ್ ಗಳು, 110 ಗೃಹರಕ್ಷಕ ದಳ ಸಿಬ್ಬಂದಿಗಳು, 1 ಡಿಎಆರ್ ತುಕಡಿ ಮತ್ತು 6 ಕೆಎಸ್ಆರ್.ಪಿ ತುಕಡಿಗಳನ್ನು ನಿಯೋಜಿಸಲಾಗಿರುತ್ತದೆ.
ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾದ ಅಧಿಕಾರಿ ಮತ್ತು ಸಿಬ್ಬಂದಿಗೆ ಎಸ್.ಪಿ ಮಿಥುನ್ ಕುಮಾರ್, ಹೆಚ್ಚುವರಿ ಎಸ್.ಪಿ. ಅನಿಲ್ ಕುಮಾರ್ ಭೂಮರಡ್ಡಿ ಅವರು ರಾಗಿಗುಡ್ಡದಲ್ಲಿ ಬ್ರೀಫಿಂಗ್ ನಡೆಸಿದರು. ಬಂದೋಬಸ್ತ್ ಸಂದರ್ಭದಲ್ಲಿ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಸೂಚನೆಗಳನ್ನು ನೀಡಿದರು.