ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸೆ. 15 ರಂದು ಶಿವಮೊಗ್ಗದ ಬಿ.ಎಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್ (science field) ನಲ್ಲಿ ಉದ್ಯೋಗ ಮೇಳ(Job fair)ವನ್ನು ಆಯೋಜಿಸಲಾಗಿದೆ.
READ | ರಾಜ್ಯದಲ್ಲಿ ಸರ್ವೇಯರ್’ಗಳ ನೇಮಕಕ್ಕೆ ಕಂದಾಯ ಸಚಿವರ ಮಹತ್ವದ ಸೂಚನೆ, ಎಷ್ಟು ಹುದ್ದೆಗಳ ಭರ್ತಿ?
ಯಾರೆಲ್ಲ ಪಾಲ್ಗೊಳ್ಳಲು ಅವಕಾಶ?
ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಐಟಿಐ, ಡಿಪ್ಲೋಮಾ, ಬಿಕಾಂ, ಬಿ,ವೋಕ್, ಬಿಎ, ಬಿಸಿಎ, ಬಿಇ, ಬಿಸಿಎ, ಬಿಇ, ಬಿಟೆಕ್ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಗಾಜನೂರು, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂ. ಸಂ.: 8747824088 ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆನಂದಗಿರಿ, ತೀರ್ಥಹಳ್ಳಿ, ಭದ್ರಾವತಿ ದೂ.ಸಂ.: 9880005425 ಗಳನ್ನು ಸಂಪರ್ಕಿಸುವಂತೆ ತೀರ್ಥಹಳ್ಳಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.