Job fair | ಎಸ್.ಎಸ್.ಎಲ್.ಸಿ.ಯಲ್ಲಿ‌ ಫೇಲ್ ಆದವರಿಗೂ ಉದ್ಯೋಗ ಅವಕಾಶ, ಕೂಡಲೇ ಬೃಹತ್ ಉದ್ಯೋಗ ಮೇಳದಲ್ಲಿ‌ ಹೆಸರು ನೋಂದಾಯಿಸಿ, ಯಾವ್ಯಾವ ಕಂಪನಿಗಳು ಭಾಗಿ?

IMG 20220517 232257 102

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸೆ.15ರಂದು ನಗರದ ಸೈನ್ಸ್ ಮೈದಾನ(science field) ದಲ್ಲಿ ಬೃಹತ್ ಉದ್ಯೋಗ ಮೇಳ(Job fair)ವನ್ನು ಆಯೋಜಿಸಲಾಗಿದ್ದು, ರಾಜ್ಯದ ಸುಮಾರು 50ಕ್ಕೂ ಹೆಚ್ಚಿನ ಬೃಹತ್ ಕಂಪನಿಗಳ ಉದ್ಯೋಗದಾತರು ಆಗಮಿಸಿ, 5000ಕ್ಕೂ ಹೆಚ್ಚಿನ ವಿದ್ಯಾವಂತ ಯುವಕರಿಗೆ ಉದ್ಯೋಗಾವಕಾಶಗಳನ್ನು ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr. R. Selvamani) ಹೇಳಿದರು.

READ | ನಗರದ ಈ ಪ್ರದೇಶದಲ್ಲಿ ಪಾರ್ಕಿಂಗ್ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ, ಕಾರಣಗಳೇನು?

ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃಧ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಇವರ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಬೃಹತ್ ಉದ್ಯೋಗ ಮೇಳದ ಪೂರ್ವಸಿದ್ಧತಾ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡಿದರು.

one click many news logo

ಅತ್ಯಂತ ಕಡಿಮೆ ಶುಲ್ಕದಲ್ಲಿ ಅತ್ಯಾಧುನಿಕ ರೀತಿಯ ಎಲೆಕ್ಟಿçಕ್ ವೆಹಿಕಲ್ ಮತ್ತು ರೋಬೋಟಿಕ್ ವಿಷಯಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸುಮಾರು 70,000 ಮಕ್ಕಳು ಐಟಿಐ ಮತ್ತು ಡಿಪ್ಲೋಮಾ ತರಬೇತಿಗೆ ದಾಖಲಾಗಿದ್ದಾರೆ. ತರಬೇತಿ ಪಡೆದ ವಿದ್ಯಾರ್ಥಿಗಳು ಪಡೆದುಕೊಳ್ಳುವ ಪ್ರಮಾಣ ಪತ್ರಕ್ಕೆ ದೇಶ-ವಿದೇಶಗಳಲ್ಲಿ ಮಾನ್ಯತೆ ದೊರೆಯಲಿದೆ.
ಡಾ.ನಾಗೇಂದ್ರ ಎಫ್.ಹೊನ್ನಳ್ಳಿ, ನಿರ್ದೇಶಕ, ಕೌಶಲ್ಯಾಭಿವೃದ್ಧಿ ಇಲಾಖೆ

ಯಾರೆಲ್ಲ ಪಾಲ್ಗೊಳ್ಳಬಹುದು?
ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣ ಮತ್ತು ಅನುತ್ತೀರ್ಣರಾದವರು, ಐಟಿಐ, ಡಿಪ್ಲೋಮಾ ಸೇರಿದಂತೆ ಎಲ್ಲ ರೀತಿಯ ಉನ್ನತ ಶಿಕ್ಷಣ, ತರಬೇತಿ ಪಡೆದ ಯುವಕರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಅಲ್ಲದೇ ಮೇಳ ನಡೆಯುವ ದಿನದಂದು ಆಕಾಂಕ್ಷಿಗಳು ಸ್ಥಳದಲ್ಲಿಯೇ ಹೆಸರು ನೋಂದಾಯಿಸಿಕೊಂಡು ಭಾಗವಹಿಸಲು ಅವಕಾಶ ಒದಗಿಸಲಾಗಿದೆ ಎಂದರು.
50ಕ್ಕೂ‌ ಹೆಚ್ಚು ಕಂಪನಿಗಳು ಭಾಗಿ
ಸಾಫ್ಟ್ವೇರ್, ಆಟೋಮೊಬೈಲ್, ಫೌಂಡ್ರಿ, ರಿಟೇಲ್ ಫಾರ್ಮಸಿ, ಹಣಕಾಸು ವಿಮೆ, ಗಾರ್ಮೆಂಟ್ಸ್ ಸೇರಿದಂತೆ 50ಕ್ಕೂ ಹೆಚ್ಚಿನ ಸ್ಥಳೀಯ ಮತ್ತು ರಾಜ್ಯ ಮಟ್ಟದ ಬೃಹತ್ ಕಂಪನಿಗಳು ಭಾಗವಹಿಸಲಿವೆ. ಈ ಮೇಳದಲ್ಲಿ ಅಪ್ರೆಂಟಿಸ್‌ಶಿಫ್ ತರಬೇತಿ ಪಡೆಯಲಿಚ್ಚಿಸುವವರು, ಕೌಶಲ್ಯ ತರಬೇತಿ ಪಡೆಯುವವರು, ಆಯ್ಕೆಗೊಂಡ ನಂತರ ನಿಗಧಿಪಡಿಸಿದ ವಿಷಯದಲ್ಲಿ ತರಬೇತಿ ಪಡೆಯಲಿಚ್ಚಿಸುವವರು, ಸ್ವಯಂ ಉದ್ಯೋಗ ಆರಂಭಿಸಲಿಚ್ಚಿಸುವವರು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.
ಆಸಕ್ತರಿಗಾಗಿ ಬ್ಯಾಂಕುಗಳ ಸಾಲಸೌಲಭ್ಯ ಮುಂತಾದ ಮಾಹಿತಿಗಳನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಮೇಳದಲ್ಲಿ ಜಿಲ್ಲೆಯ ಹಾಗೂ ನೆರೆಯ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳು ಭಾಗವಹಿಸಲಿದ್ದಾರೆ ಎಂದ ಅವರು, ಭಾಗವಹಿಸುವ ಉದ್ಯೋಗಾಕಾಂಕ್ಷಿಗಳು, ಕೈಗಾರಿಕೋದ್ಯಮಿಗಳು ಮುಂಚಿತವಾಗಿ ನೋಂದಾಯಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಆಸಕ್ತ ಯುವಕರು ತಮ್ಮ ಹೆಸರನ್ನು skillconnect.kaushalkar.com/candidatereg ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಚೇರಿ, ಹಾಗೂ ಯಾವುದೇ ಸರ್ಕಾರಿ ಐಟಿಐ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಮಾಹಿತಿಗಾಗಿ ಮೊ.ನಂ.8457825088, 9880005425, 08182-25593, 255294ನ್ನು ಸಂಪರ್ಕಿಸಬಹುದಾಗಿದೆ ಎಂದರು.
ಜಿಲ್ಲೆಯ ಕೈಗಾರಿಕೋದ್ಯಮಿಗಳು, ಜಿಲ್ಲಾ ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಅಧಿಕಾರಿ ಖಲಂದರ್‌ಖಾನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!