ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸೆ.15ರಂದು ಶಿವಮೊಗ್ಗ ನಗರದ ಸೈನ್ಸ್ ಮೈದಾನ(science field)ದಲ್ಲಿ ಆಯೋಜಿಸಲು ಉದ್ದೇಶಿಸಿದ್ದ ಉದ್ಯೋಗ ಮೇಳವನ್ನು ಕಾರಣಾಂತರದಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಉದ್ಯೋಗ ಮೇಳದಲ್ಲಿ ರಾಜ್ಯದ ಸುಮಾರು 50ಕ್ಕೂ ಹೆಚ್ಚಿನ ಬೃಹತ್ ಕಂಪನಿಗಳ ಉದ್ಯೋಗದಾತರು ಆಗಮಿಸಲಿದ್ದರು. 5000ಕ್ಕೂ ಹೆಚ್ಚಿನ ವಿದ್ಯಾವಂತ ಯುವಕರಿಗೆ ಉದ್ಯೋಗಾವಕಾಶಗಳನ್ನು ಪಡೆಯುವ ಸಾಧ್ಯತೆ ಇತ್ತು.
ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣ ಮತ್ತು ಅನುತ್ತೀರ್ಣರಾದವರು, ಐಟಿಐ, ಡಿಪ್ಲೋಮಾ ಸೇರಿದಂತೆ ಎಲ್ಲ ರೀತಿಯ ಉನ್ನತ ಶಿಕ್ಷಣ, ತರಬೇತಿ ಪಡೆದ ಯುವಕರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಆನ್ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಅಲ್ಲದೇ ಮೇಳ ನಡೆಯುವ ದಿನದಂದು ಆಕಾಂಕ್ಷಿಗಳು ಸ್ಥಳದಲ್ಲಿಯೇ ಹೆಸರು ನೋಂದಾಯಿಸಿಕೊಂಡು ಭಾಗವಹಿಸಲು ಅವಕಾಶ ಒದಗಿಸಲಾಗಿತ್ತು. ಜಿಲ್ಲೆಯಲ್ಲಿ ಸಾಕಷ್ಟು ಸ್ಪಂದನೆಯೂ ಇತ್ತು. ಕಾರಣಾಂತರಗಳಿಂದ ಉದ್ಯೋಗ ಮೇಳ ಮುಂದೂಡಲಾಗಿದೆ.