ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಬೆಂಗಳೂರು ವಿಭಾಗದ ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು ಗ್ರೇಡ್ 2 ವೃಂದದ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್ https://schooleducation.kar.nic.in/htmlKn/smteachers.html ರ ಸೇವಾ ವಿವರದಲ್ಲಿ ಕ್ರ.ಸಂ 82 ರಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ(ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿರುತ್ತದೆ. ಈ ಕರಡು ತಾತ್ಕಾಲಿಕಾ ಜೇಷ್ಟತಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬಂಧಿಸಿದ ಶಿಕ್ಷಕರು ಸಮರ್ಥನೀಯ ಪೂರಕ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಸೆ.22 ರೊಳಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಕಚೇರಿ (ಆಡಳಿತ) ರವರ ಕಚೇರಿಗೆ ನೇರವಾಗಿ ಸಲ್ಲಿಸಬಹುದೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.
ತೀರ್ಥಹಳ್ಳಿ ಅರ್ಜಿ ಆಹ್ವಾನ
THIRTHAHALLI: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಗ್ರಾಮೀಣ ಪುನರ್ವಸತಿ ಯೋಜನೆಯಡಿ ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು, ಸಾಲೂರು, ಮೇಗವಳ್ಳಿ, ಹೊದಲ ಅರಳಾಪುರ, ತೀರ್ಥಮುತ್ತೂರು, ಮೇಲಿನಕುರುವಳ್ಳಿ, ಮೇಳಿಗೆ, ಹೆದ್ದೂರು ಮತ್ತು ಕುಡುಮಲ್ಲಿಗೆ ಗ್ರಾಮ ಪಂಚಾಯ್ತಿಗಳಲ್ಲಿ ವಿ.ಆರ್.ಡಬ್ಲ್ಯು ಹುದ್ದೆಯು ಖಾಲಿಯಿದ್ದು, ಗ್ರಾ.ಪಂ/ಹತ್ತಿರದ ಗ್ರಾಮ ಪಂಚಾಯ್ತಿಗಳಲ್ಲಿ ವಾಸವಿರುವ 18 ರಿಂದ 45 ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನಿಗದಿತ ಅರ್ಜಿ ನಮೂನೆಯನ್ನು ತೀರ್ಥಹಳ್ಳಿ ತಾಲ್ಲೂಕು ಪಂಚಾಯ್ತಿ ಕಚೇರಿಯಲ್ಲಿ ಎಂ.ಆರ್.ಡಬ್ಲ್ಯು ಆಗಿ ಕಾರ್ಯ ನಿರ್ವಹಿಸುತ್ತಿರುವ ದಿವಾಕರ್ ಬಿ.ಆರ್. ಮೊ.ಸಂ: 9480767638 ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿಗಳನ್ನು ಅ.10 ರೊಳಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಸೊರಬ ಅರ್ಜಿ ಆಹ್ವಾನ
SORAB: ಸೊರಬ ತಾಲ್ಲೂಕಿನ ಗುಡುವಿ ಗ್ರಾಮ ಪಂಚಾಯ್ತಿಯಲ್ಲಿ ವಿ.ಆರ್.ಡಬ್ಲ್ಯು ಹುದ್ದೆಯು ಖಾಲಿಯಿದ್ದು, ಗ್ರಾ.ಪಂ/ ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ ವಾಸವಿರುವ 18 ರಿಂದ 45 ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ನಿಗದಿತ ಅರ್ಜಿ ನಮೂನೆಯನ್ನು ಸೊರಬ ತಾಲ್ಲೂಕು ಪಂಚಾಯ್ತಿ ಕಚೇರಿಯಲ್ಲಿ ಎಂ.ಆರ್.ಡಬ್ಲ್ಯು ಆಗಿ ಕಾರ್ಯ ನಿರ್ವಹಿಸುತ್ತಿರುವ ಭರತ್ ಕುಮಾರ್ ಮೊ.ಸಂ: 9110493122 ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿಗಳನ್ನು ಅ.10 ರೊಳಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
READ | ಎಚ್.ಎಸ್.ಆರ್.ಪಿಗೆ ಅರ್ಜಿ ಸಲ್ಲಿಕೆ ಹೇಗೆ, ಏನಿದು ಅತಿ ಸುರಕ್ಷಿತ ನೋಂದಣಿ ಫಲಕ? ಇಲ್ಲಿದೆ ವಿವರ
ಸಾಗರ ಅರ್ಜಿ ಆಹ್ವಾನ
SAGAR: ಸಾಗರ ತಾಲ್ಲೂಕಿನ ತುಮರಿ ಗ್ರಾಮ ಪಂಚಾಯ್ತಿಯಲ್ಲಿ ವಿ.ಆರ್.ಡಬ್ಲ್ಯು ಹುದ್ದೆಯು ಖಾಲಿಯಿದ್ದು, ಗ್ರಾ.ಪಂ/ ಹತ್ತಿರದ ಗ್ರಾಮ ಪಂಚಾಯ್ತಿಗಳಲ್ಲಿ ವಾಸವಿರುವ 18 ರಿಂದ 45 ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನಿಗದಿತ ಅರ್ಜಿ ನಮೂನೆಯನ್ನು ಸಾಗರ ತಾಲ್ಲೂಕು ಪಂಚಾಯ್ತಿ ಕಚೇರಿಯಲ್ಲಿ ಎಂ.ಆರ್.ಡಬ್ಲ್ಯು ಆಗಿ ಕಾರ್ಯ ನಿರ್ವಹಿಸುತ್ತಿರುವ ಶ್ಯಾಮ್ ಸುಂದರ್ ಕೆ.ಎನ್. ಮೊ.ಸಂ: 9535247757 ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿಗಳನ್ನು ಅ.10 ರೊಳಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಆನ್‍ಲೈನ್ ಅರ್ಜಿ ಆಹ್ವಾನ
SHIMOGA: ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2023-24 ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು http://shp.karnataka.gov.in ರಲ್ಲಿ ಅ.11 ರೊಳಗಾಗಿ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದೂ.ಸಂ. ಸಂಖ್ಯೆ 08182-220206, ಶಿವಮೊಗ್ಗ, ವಿಸ್ತರಣಾಧಿಕಾರಿ, ಉ.ವಿ, ಶಿವಮೊಗ್ಗ -9482711634, ವಿಸ್ತರಣಾಧಿಕಾರಿ, ಉ.ವಿ, ಸಾಗರ -9110278031, ಜಿಲ್ಲಾ ಮಾಹಿತಿ ಕೇಂದ್ರ ಶಿವಮೊಗ್ಗ -7676888388, ಭದ್ರಾವತಿ-9538853680, ತೀರ್ಥಹಳ್ಳಿ- 8861982835, ಸಾಗರ-7338222907, ಸೊರಬ- 9513815513, ಹೊಸನಗರ- 9008447029 ಹಾಗೂ ಶಿಕಾರಿಪುರ- 7829136724 ಗಳನ್ನು ಸಂಪರ್ಕಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆ ತಿಳಿಸಿರುತ್ತಾರೆ.