ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ (Madhu Bangarappa) ಅವರು ಸೆ.11 ರಿಂದ 13 ರವರೆಗೆ ಜಿಲ್ಲಾ ಪ್ರವಾಸ ಕೈಗೊಳ್ಳುವರು.
READ | ನಗರದ ಈ ಪ್ರದೇಶದಲ್ಲಿ ಪಾರ್ಕಿಂಗ್ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ, ಕಾರಣಗಳೇನು?
ಸೆ.11 ರಂದು ಬೆಂಗಳೂರಿನಿಂದ ಹೊರಟು ರಾತ್ರಿ 8 ಗಂಟೆಗೆ ಸೊರಬಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಸೆ.12 ರ ಬೆಳಗ್ಗೆ 9 ಗಂಟೆಗೆ ಸೊರಬ ತಾಲೂಕು ಜಡೆ ಗ್ರಾಮದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟನೆ, ಬೆ.10ಕ್ಕೆ ಕುಬಟೂರು ಕೆರೆ ಬಾಗಿನ ಸಮರ್ಪಣೆ ಕಾರ್ಯಕ್ರಮ, ಸಂಜೆ 4 ಕ್ಕೆ ಶಿವಮೊಗ್ಗದಲ್ಲಿ ಎಸ್.ಪಿ.ಯವರೊಂದಿಗೆ ಗಣೇಶ ಚತುರ್ಥಿಗೆ ಸಂಬಂಧಿಸಿದಂತೆ ಸೌಹಾರ್ದ ಸಭೆಯಲ್ಲಿ ಪಾಲ್ಗೊಳ್ಳುವರು ಹಾಗೂ ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಸೆ.13 ರ ಬೆಳಗ್ಗೆ 10ಕ್ಕೆ ಸೊರಬದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ, ಮಧ್ಯಾಹ್ನ 3 ಶಿಕಾರಿಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು. ಸಂಜೆ 7ಕ್ಕೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.