ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಸರಹಳ್ಳಿ- ಭದ್ರಾವತಿ ರೈಲ್ವೆ ಲೆವೆಲ್ ಕ್ರಾಸಿಂಗ್ ತಾಂತ್ರಿಕ ಪರಿಶೀಲನೆ ಹಿನ್ನೆಲೆಯಲ್ಲಿ ತಾತ್ಕಾಲಿಕ ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಲಾಗಿದೆ.
ಮಸರಹಳ್ಳಿ-ಭದ್ರಾವತಿ (Masarahalli- Bhadravathi) ರೈಲ್ವೆ ಸ್ಟೇಷನ್ ನಡುವೆ ಬರುವ ರೈಲ್ವೆ ಲೆವಲ್ ಕ್ರಾಸಿಂಗ್ ಗೇಟ್’ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಸೆ.30ರಿಂದ ಅಕ್ಟೋಬರ್ 2ರವರೆಗೆ ಗೇಟ್ ಮುಚ್ಚಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚರಿಸಲು ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ಆದೇಶಿಸಿದ್ದಾರೆ.
READ | ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಅಧಿಕಾರಿಗಳ ದಿಢೀರ್ ಭೇಟಿ, ನೀರು ಪರೀಕ್ಷೆ, ಕಾರಣವೇನು?
ಸೆ.30 ರಿಂದ ಅ.2ರವರೆಗೆ ಭದ್ರಾವತಿಯಿಂದ ಮಸರಹಳಿಗೆ ಹೋಗುವ ವಾಹನಗಳು ಶಿವನಿ ಕ್ರಾಸ್- ಅಂತರಗಂಗೆ-ಮಸರಹಳ್ಳಿಗೆ ಅಥವಾ ಬಾರಂದೂರು-ಹಳ್ಳಿಕೆರೆ-ಮಸರಹಳ್ಳಿ ಮೂಲಕ ರೈಲ್ವೆ ಲೆವಲ್ ಕ್ರಾಸ್ ಗೇಟ್ ನಂ: 42/100-200 ರ ಮೂಲಕ ಪರ್ಯಾಯ ಮಾರ್ಗದಲ್ಲಿ ಸಂಚರಿಸಬಹುದಾಗಿರುತ್ತದೆ.
ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ರೈಲ್ವೆ ಲೆವಲ್ ಕ್ರಾಸಿಂಗ್ ಗೇಟ್ ಗಳ ತಾಂತ್ರಿಕ ಪರಿಶೀಲನೆ ಕಾಮಗಾರಿ ತ್ವರಿತಗತಿಯಿಂದ ಪೂರ್ಣಗೊಳ್ಳಬೇಕಾಗಿರುವುದರಿಂದ ತಾತ್ಕಾಲಿಕವಾಗಿ ಈ ಮೇಲ್ಕಂಡ ದಿನಾಂಕಗಳಲ್ಲಿ ಮಾತ್ರ ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಆದೇಶಿಸಿದೆ.