ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGG: ಮೆಸ್ಕಾಂ ಭದ್ರಾವತಿ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಸೆ.11 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ದೂ. ಸಂ.:9448289507 ನ್ನು ಸಂಪರ್ಕಿಸುವುದು.