BJP v/s Congress | ರಾಜ್ಯದಲ್ಲಿ ಮತ್ತೊಮ್ಮೆ ನಡೆಯಲಿದೆ ‘ಆಪರೇಷನ್ ಕಮಲ’, ಲೋಕಸಭೆ ಚುನಾವಣೆ ವೇಳೆಗೆ ಸರ್ಕಾರ ಬದಲಾವಣೆ ಪಕ್ಕಾ ಅಂತೆ!

BJP

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯದಲ್ಲಿ ಮತ್ತೊಮ್ಮೆ ‘ಆಪರೇಷನ್ ಕಮಲ (Operation Lotus)’ ನಡೆಯಲಿದೆ.‌ ಲೋಕಸಭೆ ಚುನಾವಣೆ (MP Election) ಒಳಗೆ ಅಥವಾ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (K.S.Eshwarappa) ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ‌.

KS Eshwarappa

READ | ವೈಯಕ್ತಿಕ‌ ಜಗಳಕ್ಕೆ 300 ಅಡಿಕೆ‌ ಸಸಿಗಳು ನಾಶ!

ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವ ಇವರು, ‘ರಾಜ್ಯದಲ್ಲಿ ಬರಗಾಲದ ಸ್ಥಿತಿ ಇದ್ದರೂ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ. ತಿಹಾರ್ ಜೈಲಿಗೆ ಹೋಗಿ ಬಂದವರು ಬೇರೆಯವರಿಗೆ ವೇದಾಂತ ಬೋಧಿಸುತ್ತಿದ್ದಾರೆ. ಅಧಿಕಾರದಲ್ಲಿರುವ ಪಕ್ಷದ ಬಗ್ಗೆಯೇ ಕಾಂಗ್ರೆಸ್ ಶಾಸಕರಿಗೆ ನಂಬಿಕೆ ಇಲ್ಲ. ಹಾಗಾಗಿ, ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದೆ’ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ (T.D.Megharaj) ಮಾತನಾಡಿ, ಸೆ.8ರಂದು ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿಎಸ್.ಅರುಣ್ ಸೇರಿ ಇನ್ನಿತರರಿದ್ದರು.

Forest amendment bill | ಅರಣ್ಯಕ್ಕೆ ಅಪಾಯ ತರಲಿದೆ ‘ಅರಣ್ಯ ಕಾಯ್ದೆ ತಿದ್ದುಪಡಿ ಮಸೂದೆ’, ಆಕ್ಷೇಪಣೆ ಸಲ್ಲಿಕೆಗೇನು ಕಾರಣ?

error: Content is protected !!