ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ತಾಲೂಕು ತ್ಯಾವರೆಚಟ್ನಹಳ್ಳಿ (Tyavarechatnahalli) ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಸೆ.13 ರ ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕುವೆಂಪುನಗರ, ಎನ್.ಇ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜು, ಪರ್ಫೆಕ್ಟ್ ಅಲಾಯನ್ಸ್ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಬೊಮ್ಮನಕಟ್ಟೆ ಎ ರಿಮದ ಹೆಚ್ ಬ್ಲಾಕ್ವರೆಗೆ, ಹಳೆ ಬೊಮ್ಮನಕಟ್ಟೆ, ವಿನಾಯಕ ಬಡಾವಣೆ, ದೇವಂಗಿ 2ನೇ ಹಂತದ ಬಡಾವಣೆ, ಶಾಂತಿನಗರ, ಹೊನ್ನಾಳಿ ರಸ್ತೆ, ತ್ಯಾವರೆಚಟ್ನಹಳ್ಳಿ, ಯು.ಜಿ.ಡಿ., ಶೇಷಾದ್ರಿಪುರಂ, ಲಕ್ಷ್ಮೀ ವೆಂಕಟೇಶ್ವರ ಸಾ ಮಿಲ್, ತ್ರೀಮೂರ್ತಿ ನಗರ, ನವುಲೆ, ಅಶ್ವತ್ನಗರ, ಎಲ್.ಬಿ.ಎಸ್. ನಗರ, ಕೀರ್ತಿನಗರ, ಬಸವೇಶ್ವರ ನಗರ, ಕೃಷಿನಗರ, ತರಳಬಾಳು ಬಡಾವಣೆ, ಸೇವಾಲಾಲ್ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
READ | ಎಸ್.ಎಸ್.ಎಲ್.ಸಿಯಲ್ಲಿ ಫೇಲ್ ಆದವರಿಗೂ ಉದ್ಯೋಗ ಅವಕಾಶ, ಕೂಡಲೇ ಹೆಸರು ನೋಂದಾಯಿಸಿ
ಗ್ರಾಮಗಳಲ್ಲೂ ಪವರ್ ಕಟ್
SHIMOGA: ಶಿವಮೊಗ್ಗ ತಾಲೂಕು ಹೊಳೆಹೊನ್ನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಗ್ರಾಮಗಳಲ್ಲಿ ಸೆ.13 ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಮಲ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸೆ.14ರಂದು ವಿದ್ಯುತ್ ವ್ಯತ್ಯಯ
SHIMOGA: ತಾಲೂಕು ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಗ್ರಾಮಗಳಲ್ಲಿ ಸೆ.14 ರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ರೇಬೈಲು, ಹಾಲಲಕ್ಕವಳ್ಳಿ, ಕಡೇಕಲ್, ತಟ್ಟಿಕೆರೆ, ಯರಗನಾಳ್, ಕುಸ್ಕೂರು, ಸಿದ್ಧರಹಳ್ಳಿ, ಮಂಡೇನಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಜೋಗದಲ್ಲಿ ಮೆಸ್ಕಾಂ ಸಭೆ
JOGFALLS: ಮೆಸ್ಕಾಂ ಜೋಗ ಉಪ ವಿಭಾಗ (Jog sub division) ಕಚೇರಿಯಲ್ಲಿ ಸೆ.15 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:9448289520 ಸಂಪರ್ಕಿಸುವುದು.
Dacoit | ಲಿಫ್ಟ್ ನೀಡುವುದಾಗಿ ಕರೆದೊಯ್ದು ದರೋಡೆ, 24 ಗಂಟೆಯಲ್ಲೇ ಆರೋಪಿಗಳು ಅಂದರ್