ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (Department of Soldiers Welfare and Rehabilitation) 14 ಕಲ್ಯಾಣ ಸಂಘಟಿಕರ ‘ಸಿ’ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಕರೆಯಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆ.9 ರವರೆಗೆ ವಿಸ್ತರಿಸಲಾಗಿದೆ.
READ | ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಉದ್ಯೋಗ ಅವಕಾಶ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಅರ್ಹತೆಯುಳ್ಳ ಭೂಸೇನೆಯ ಜೆ.ಸಿ.ಓ ರ್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರ್ಯಾಂಕ್ನಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ (Kalyana Karnataka) ಅಭ್ಯರ್ಥಿಯೆಂದು ಪ್ರಮಾಣ ಪತ್ರ ಸಲ್ಲಿಸದಿದ್ದಲ್ಲಿ, ಈ ಹಿಂದೆ ಸಲ್ಲಿಸಲಾದ ಅರ್ಜಿಯ ನಕಲು ಪ್ರತಿಯೊಂದಿಗೆ ಸದರಿ ಪ್ರಮಾಣ ಪತ್ರವನ್ನು ಲಗತ್ತಿಸಿ ನೇಮಕಾತಿ ಪ್ರಾಧಿಕಾರಕ್ಕೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇವರ ದೂರವಾಣಿ ಸಂಖ್ಯೆ 080-25589459 ಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.