Teacher day | ಶಿವಮೊಗ್ಗದಲ್ಲಿ ಅದ್ಧೂರಿ ಶಿಕ್ಷಕರ ದಿನಾಚರಣೆ, ಚೊಚ್ಚಲ ಬಾರಿಗೆ ರಾಷ್ಟ್ರೀಯ ರಕ್ಷಣಾ ವಿವಿಯಲ್ಲಿ ಕಾರ್ಯಕ್ರಮ

Rakhsa university

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾಲಯದ ಆವರಣದಲ್ಲಿ ಇಂದು ಶಿಕ್ಷಕರ ದಿನಾಚರಣೆಯನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಆರ್‍ಆರ್‍.ಯು ಶಿವಮೊಗ್ಗ ಕ್ಯಾಂಪಸ್‍ನ ನಿರ್ದೇಶಕ ಡಾ.ಆನಂದಕುಮಾರ್ ತ್ರಿಪಾಠಿ ಅವರು ಸರ್ವರನ್ನು ಸ್ವಾಗತಿಸಿ ಮಾತನಾಡಿ, ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾನಿಲಯವು ಸಾಂಪ್ರದಾಯಿಕ ರೀತಿಯಲ್ಲಿ ಸೆ.4ರಂದು ಶೈಕ್ಷಣಿಕ ಕಾರ್ಯವನ್ನು ಔಪಚಾರಿಕವಾಗಿ ಪ್ರಾರಂಭಿಸಿದೆ.

READ | ಕೇಂದ್ರೀಯ ಉಗ್ರಾಣ‌ ನಿಗಮದಲ್ಲಿ ಉದ್ಯೋಗ ಅವಕಾಶ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Drama Logo

ನೀವು ಈ ವಿಶ್ವವಿದ್ಯಾನಿಲಯದ ಮೊದಲ ಅಧಿವೇಶನದ ವಿದ್ಯಾರ್ಥಿಗಳು, ಇದು ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಮತ್ತು ವಿಶ್ವವಿದ್ಯಾನಿಲಯಕ್ಕೆ ವಿಶೇಷವಾಗಿದೆ. ಇದು ನಿಮಗೆ ಎಂದೆಂದಿಗೂ ವಿಶೇಷವಾಗಿ ಉಳಿಯುತ್ತದೆ. ಮುಂದಿನ ದಿನಗಳಲ್ಲಿ ಈ ವಿಶ್ವವಿದ್ಯಾಲಯವು ದೇಶ ಮಾತ್ರವಲ್ಲದೆ ವಿಶ್ವ ಮಟ್ಟದಲ್ಲಿ ಹೆಸರು ಮಾಡುತ್ತದೆ.
ಜಿ.ಕೆ.ಮಿಥುನ್‍ ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ

ಈ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಭದ್ರತೆ, ಡಿಜಿಟಲ್ ತನಿಖೆ ಮತ್ತು ಪೊಲೀಸ್ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಣವನ್ನು ಒದಗಿಸುತ್ತದೆ. ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಮತ್ತು ಪ್ರಮಾಣ ಪತ್ರ ಮಟ್ಟದ ಶಿಕ್ಷಣವನ್ನು ನೀಡಲಾಗುವುದು.
ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಬಿಮಲ್ ಎನ್. ಪಟೇಲ್ ಅವರು ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಸಮ್ಮೇಳನದ ಮೂಲಕ ವಿಶ್ವವಿದ್ಯಾಲಯದ ಕಾರ್ಯಕ್ರಮಗಳ ಬಗ್ಗೆ ವಿವರವಾಗಿ ತಿಳಿಸಿದರು.
ಇಲ್ಲಿಂದ ಶಿಕ್ಷಣ ಪಡೆದ ನಂತರ ವಿದ್ಯಾರ್ಥಿಗಳು ಪೊಲೀಸ್, ಭದ್ರತಾ ಸೇವೆ ಮತ್ತು ವೈಯಕ್ತಿಕ ಭದ್ರತೆ ಕ್ಷೇತ್ರದಲ್ಲಿ ಅಪಾರ ಉದ್ಯೋಗಾವಕಾಶಗಳನ್ನು ಹೊಂದಲಿದ್ದಾರೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಮಾತನಾಡಿ, ನಿಮ್ಮ ಪ್ರಗತಿಗೆ ಸದಾ ಸಂತಸ ವ್ಯಕ್ತಪಡಿಸುವ ಜಗತ್ತಿನ ಇಬ್ಬರು ವ್ಯಕ್ತಿಗಳೆಂದರೆ ಶಿಕ್ಷಕರು ಮತ್ತು ಪೊಷಕರು. ಆದ್ದರಿಂದ, ಶಿಕ್ಷಕರ ಸಮರ್ಪಣೆ ಮತ್ತು ಶೈಕ್ಷಣಿಕ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.
ಉಪಸ್ಥಿತರಿದ್ದ ಗಣ್ಯರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆವರಣದಲ್ಲಿ ಸಸಿಗಳನ್ನು ನೆಟ್ಟರು.

ಸ್ವಾಭಿಮಾನದ ನೆಲೆ ತಿಳಿಸಿಕೊಡಬೇಕಿದೆ

Teachers day1

SHIMOGA: ಆಧುನಿಕತೆ-ಯಾಂತ್ರಿಕತೆಯ ಹಿನ್ನೆಲೆಯಲ್ಲಿ ಶಿಕ್ಷಕರು ಅತ್ಯಂತ ಸಂಕಷ್ಟದ ಪರಿಸ್ಥಿಯಲ್ಲಿದ್ದು ಅವರು ಅನಿವಾರ್ಯವಾಗಿ ಮಕ್ಕಳಿಗೆ ಸ್ವಾಭಿಮಾನದ ನೆಲೆಗಳನ್ನು ತಿಳಿಸಿಕೊಡಬೇಕಾಗಿದೆ ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಮೋಹನ್ ಚಂದ್ರಗುತ್ತಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಉಪನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ಪ್ರಸ್ತುತ ಆಲೋಚನಾ ಕ್ರಮಗಳಲ್ಲಿ ವ್ಯತ್ಯಾಸವಿದೆ. ಆಧುನಿಕತೆ ವೇಗದಲ್ಲಿ, ಯಾಂತ್ರಿಕತೆಯ ಭರಾಟೆಯಲ್ಲಿ ವಿವೇಕ, ಪರಂಪರೆ ಮರೆ ಮಾಚುತ್ತಿರುವ ಇಂದಿನ ಕಾಲಘಟ್ಟದಲ್ಲಿ ಶಿಕ್ಷಕರಿಗೆ ಪಾಠ ಮಾಡಲು ನೂರಾರು ಸವಾಲುಗಳಿವೆ. ಇಂತಹ ಸಂಕಷ್ಟ ಸ್ಥಿತಿಯನ್ನು ಎದುರಿಸಲು ಆತ್ಮಸ್ಥೈರ್ಯ ಮತ್ತು ವಿವೇಕವನ್ನು ಶಿಕ್ಷಕರು ಸ್ಪಷ್ಟಪಡಿಸಿಕೊಳ್ಳಬೇಕಿದೆ. ಮಕ್ಕಳಿಗೆ ಸ್ವಾಭಿಮಾನವನ್ನು ಕಲಿಸಬೇಕಿದೆ.

READ | ಶಿವಮೊಗ್ಗದಲ್ಲಿ ಅನಧಿಕೃತ ರೈಲ್ವೆ ಟಿಕೆಟ್ ಬುಕಿಂಗ್ ಗ್ಯಾಂಗ್ ಪತ್ತೆ, ಮೂವರು ಅರೆಸ್ಟ್, ಎಲ್ಲೆಲ್ಲಿ ದಾಳಿ?

ಜಾಗತಿಕ ಮಟ್ಟದಲ್ಲಿ ಭಾರತ

Teachers day 2
ಸಂಸದರಾದ ಬಿ.ವೈ.ರಾಘವೇಂದ್ರ ಮಾತನಾಡಿ, ಶಿಕ್ಷಕ ಮನಸ್ಸು ಮಾಡಿದರೆ ಎಷ್ಟೆತ್ತರಕ್ಕಾದರೂ ಬೆಳೆಯಬಹುದು ಎಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರನ್ನು ನೋಡಿದರೆ ತಿಳಿಯುತ್ತದೆ. ಅವರು ಎಷ್ಟೇ ಎತ್ತರಕ್ಕೇರಿದರೂ ಶಿಕ್ಷಕನ ಗೌರವ ಸ್ಥಾನ ಉಳಿಸಿಕೊಂಡಿದ್ದರು ಎಂದು ಸ್ಮರಿಸಿದರು.
ಜಾಗತಿಕ ಮಟ್ಟದಲ್ಲಿ ಭಾರತ ಎತ್ತರದ ಸ್ಥಾನಕ್ಕೆ ತಲುಪಿದೆ. ಎಲ್ಲೆಡೆ ಹೆಸರು ಮಾಡುತ್ತಿದೆ. ಜಾಗತಿಕ ಸ್ಪರ್ಧೆಗೆ ನಮ್ಮ ಯುವಜನತೆಯನ್ನು ತಯಾರು ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದ ಅವರು ಶಿಕ್ಷಣ ಕ್ಷೇತ್ರದಲ್ಲಿ, ಪದೇ ಪದೇ ಬದಲಾವಣೆ ಕೈಗೊಂಡರೆ ಮಕ್ಕಳಿಗೆ ತೊಂದರೆ ಆಗುತ್ತದೆ ಆದ್ದರಿಂದ ಸೂಕ್ಷ್ಮವಾಗಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದರು.

Market news Logo
ಮಕ್ಕಳಿಗೆ ಮೊದಲು ಜೀವನದ ಶಿಕ್ಷಣ ಕಲಿಸಬೇಕಿದೆ. ಅದಕ್ಕೆ ಗುಣಮಟ್ಟದ ಶಿಕ್ಷಣ ಅತ್ಯಗತ್ಯವಾಗಿದ್ದು ಪಠ್ಯಪುಸ್ತಕದ ವಿಷಯದಲ್ಲಿ ರಾಜಕೀಯ ಮಾಡಬಾರದು. ಸಮಾಜದ ಮುಖ್ಯವಾಹಿನಿಯಲ್ಲಿ ಕೆಲಸ ಮಾಡುವ ಶಿಕ್ಷಕರ ಮೇಲೆ ಹೆಚ್ಚಿನ ಜವಾಬ್ದಾರಿ ಇದ್ದು, ಎಷ್ಟೇ ಸಮಸ್ಯೆಗಳಿದ್ದರೂ ಪ್ರಾಥಮಿಕ ಹಂತದಿಂದ ಕಾಲೇಜಿನ ಶಿಕ್ಷಣದವರೆಗೆ ಶಿಕ್ಷಣ ನೀಡುವಲ್ಲಿ ಅವರು ಎಲ್ಲೂ ಎಡವಿಲ್ಲ. ಸ್ವಸ್ಥ ಸಮಾಜ ಕಟ್ಟುವ ಶಕ್ತಿ ಇದ್ದರೆ ಅದು ಶಿಕ್ಷಕರಿಲ್ಲಿದೆ ಎಂದ ಅವರು ಸಂಸ್ಕಾರ ಕಲಿತ ಮಕ್ಕಳು ಎಂದೂ ಭ್ರಷ್ಟರಾಗುವುದಿಲ್ಲ.
ಎಸ್.ಎಲ್.ಭೋಜೇಗೌಡ, ವಿಧಾನ ಪರಿಷತ್ ಶಾಸಕ

ಸರ್ಕಾರಿ ಕಿರಿಯ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲಾ ಪ್ರಶಸ್ತಿ ಪಡೆದ 38 ಶಿಕ್ಷಕರುಗಳಿಗೆ ಪ್ರಶಸ್ತಿ ನೀಡಿ ಹಾಗೂ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ 80 ಶಿಕ್ಷಕರುಗಳನ್ನು ಸನ್ಮಾನಿಸಲಾಯಿತು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಶಿಕ್ಷಕರ ದಿನಾಚರಣೆ ಹಿನ್ನೆಲೆ ಕಳುಹಿಸಿದ್ದ ಸಂದೇಶವನ್ನು ವಿಷಯ ಪರಿವೀಕ್ಷಕ ಸತೀಶ್ ಅವರು ವಾಚಿಸಿದರು.
ವಿಧಾನಸಭಾ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಾಲಿಕೆ ಮಹಾಪೌರ ಶಿವಕುಮಾರ್, ಉಪ ಮಹಾಪೌರರಾದ ಲಕ್ಷ್ಮೀ ಶಂಕರನಾಯ್ಕ, ಸದಸ್ಯರಾದ ಹೆಚ್.ಸಿ.ಯೋಗೇಶ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ, ವೈ.ಎಚ್.ನಾಗರಾಜ್, ವಿವಿಧ ಶಿಕ್ಷಕರ ಸಂಘಗಳ ಪದಾಧಿಕಾರಿಗಳು ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Western Ghats | ಚಿಲಿ ಮಾದರಿಯ ಅಗ್ನಿ ಅವಘಡ ಪಶ್ಚಿಮಘಟ್ಟದಲ್ಲಿ ಸಂಭವಿಸುವ ಸಂಭವ, ಎಚ್ಚರಿಕೆ ನೀಡಿದ ನಾಗೇಶ್ ಹೆಗಡೆ

error: Content is protected !!