ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: 2023-24 ನೇ ಸಾಲಿನ ಶಿವಮೊಗ್ಗ ತಾಲ್ಲೂಕಿನ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ನವೀನ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಭಾರತ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪೋಷಕರ ವಾರ್ಷಿಕ ಆದಾಯ ಮಿತಿ ₹2.50 ಲಕ್ಷದೊಳಗಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು www.sw.kar.nic.in ಮತ್ತು https://ssp.postmatric.karnataka.gov.in/homepage.aspx ಇಲಾಖಾ ವೆಬ್ಸೈಟ್ ವಿಳಾಸದ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-1) ದೂರವಾಣಿ ಸಂಖ್ಯೆ: 08182-240512 ನ್ನು ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
READ | ತೀರ್ಥಹಳ್ಳಿಯಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ, ಒಬ್ಬನ ಸ್ಥಿತಿ ಗಂಭೀರ, ಇಡೀ ಗ್ರಾಮವೇ ದಂಗು
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ
SHIKARIPURA: 2023-24ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ/ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ 1 ರಿಂದ 10 ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಪ.ಜಾ./ಪ.ವ.ಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ http://ssp.karnataka.gov.in ರಲ್ಲಿ ಅ.20 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ
BHADRAVATHI: ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯು 2023-24ನೇ ಸಾಲಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ನಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಂದ SATS ID ಮುಖಾಂತರ ಅರ್ಜಿ ಆಹ್ವಾನಿಸಿದೆ.
ಅರ್ಜಿಯೊಂದಿಗೆ ಪೋಷಕರ ಮೊಬೈಲ್ ಸಂ., ವಿದ್ಯಾರ್ಥಿಯ ಮತ್ತು ಪೋಷಕರ ಆಧಾರ್ ಸಂಖ್ಯೆ/ಇ.ಐ.ಡಿ.ಸಂಖ್ಯೆ ಮತ್ತು ಆಧಾರ್ನಲ್ಲಿರುವ ಹೆಸರು ಒಂದೇ ಆಗಿರಬೇಕು. ವಿದ್ಯಾರ್ಥಿಯ ಹೆಸರಿನಲ್ಲಿ ನೀಡಿರುವ ಗಣಕೀಕೃತ ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ವಿದ್ಯಾರ್ಥಿಯ ಆಧಾರ್ ಸೀಡೀಂಗ್ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ಆಗಿರುವ ರಾಷ್ಟ್ರೀಕೃತ ಬ್ಯಾಂಕ್ ಖಾತೆ ಪ್ರತಿಯನ್ನು ಲಗತ್ತಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ. ಸಂ.: 08282-263761 ನ್ನು ಸಂಪರ್ಕಿಸುವುದು.
ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಅರ್ಜಿ
SHIMOGA: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2023-24 ನೇ ಸಾಲಿಗೆ ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ಒದಗಿಸಲು ಸುವಿಧಾ ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.
ಯಾರೆಲ್ಲ ಅರ್ಜಿ ಸಲ್ಲಿಸಲು ಅವಕಾಶ?
ಈ ಮೇಲ್ಕಂಡ ಎಲ್ಲ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ/ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇತರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.
ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು.
ಅರ್ಜಿ ಸಲ್ಲಿಸಲು ಅ.31ಕಡೆಯ ದಿನವಾಗಿದ್ದು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್ www.dbcdc.karnataka.gov.in ಹಾಗೂ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ: 08182-229634 ನ್ನು ಸಂಪರ್ಕಿಸಬಹುದೆಂದು ಡಿಬಿಸಿಡಿಸಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ .
KSET 2023 | ಪರೀಕ್ಷಾರ್ಥಿಗಳೇ ಗಮನಿಸಿ, ಕೆಸೆಟ್ ಅರ್ಜಿ ಸಲ್ಲಿಕೆ ಅವಧಿ ಮುಂದೂಡಿಕೆ