ಸುದ್ದಿ ಕಣಜ.ಕಾಂ ಭದ್ರಾವತಿ
BHADRAVATHI: ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನೊಬ್ಬನಿಗೆ ಹರಿತ ವಸ್ತುವಿನಿಂದ ಚುಚ್ಚಿದ ಘಟನೆ ಸಂಭವಿಸಿದೆ. ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
READ | ಸಿಕ್ಕಿದ ವಿಡಿಯೋಗಳನ್ನೆಲ್ಲ ಶೇರ್ ಮಾಡುವವರೇ ಹುಷಾರ್, ಶಿವಮೊಗ್ಗ ಪೊಲೀಸರಿಂದ ಇಂಥವರ ವಿರುದ್ಧ ಸಮರ
ನಂದಕುಮಾರ್ ಎಂಬಾತ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಮೊಬೈಲ್ ಮತ್ತು ವೈಯಕ್ತಿಕ ಕಾರಣಗಳಿಂದ ಹಲ್ಲೆ ಘಟನೆ ನಡೆದಿದೆ ಎಂದು ಎಸ್.ಪಿ. ಜಿ.ಕೆ.ಮಿಥುನ್ ಕುಮಾರ್ ಅವರು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.
9 ಜನರನ್ನು ವಶಕ್ಕೆ ಪಡೆದ ಪೊಲೀಸ್
ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 9 ಜನರನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಯುತ್ತಿದೆ. ಹೊಸಮನೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.