ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ(Dr Babu Jagjivan Ram Leather Industries Development Corporation Ltd) ವು ನೆಹರೂ ರಸ್ತೆಯಲ್ಲಿರುವ ಬಸವ ಸದನ ಕಾಂಪ್ಲೆಕ್ಸ್ (Basava sadana complex)ನ ಲಿಡ್ಕರ್ ಮಳಿಗೆಯಲ್ಲಿ ಅಪ್ಪಟ ಚರ್ಮ ವಸ್ತುಗಳ ಮೇಲೆ ದಸರಾ (dasara) ಮತ್ತು ದೀಪಾವಳಿ (deepavali) ಹಬ್ಬದ ಪ್ರಯುಕ್ತ ಅ.18 ರಿಂದ ನ.18ರವರೆಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9480886268 ಅನ್ನು ಸಂಪರ್ಕಿಸುವುದು.
READ | ರೈಲ್ವೆ ಸಿಬ್ಬಂದಿಗೆ ಗುಡ್ ನ್ಯೂಸ್ ನೀಡಿದ ಪ್ರಧಾನಿ ನರೇಂದ್ರ ಮೋದಿ, ಯಾರಿಗೆಲ್ಲ ಅನ್ವಯ?
ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
SHIMOGA: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ರಾಜ್ಯ ಸರ್ಕಾರವು ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ/ನಿರ್ವಹಿಸುತ್ತಿರು ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಇಲಾಖೆ ವೆಬ್ಸೈಟ್ www.dwdsc.kar.nic.in ರಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅ.25 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಬಿಎಸ್ಎನ್ಎಲ್ ಕಚೇರಿ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ಖುದ್ದಾಗಿ ಅಥವಾ ವೆಬ್ಸೈಟ್ ಅಥವಾ ದೂ.ಸಂ.: 08182-295234/251676 ಗಳನ್ನು ಸಂಪರ್ಕಿಸುವುದು.
ಮೆಸ್ಕಾಂ ಜನ ಸಂಪರ್ಕ ಸಭೆ
SHIMOGA: ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-2 ಕಛೇರಿಯಲ್ಲಿ ಅ. 20 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಮಾಹಿತಿಗಾಗಿ ದೂರವಾಣಿ ಸಂಖ್ಯೆ:9448289449 ನ್ನು ಸಂಪರ್ಕಿಸುವುದು.