Fire accident | ತೀರ್ಥಹಳ್ಳಿಯಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ, ಒಬ್ಬನ ಸ್ಥಿತಿ ಗಂಭೀರ, ಇಡೀ ಗ್ರಾಮವೇ ದಂಗು

thirthahalli fire 1

 

 

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ
SHIVAMOGGA: ತಾಲೂಕಿನ ಕೆಕೋಡ್ ಗ್ರಾಮದಲ್ಲಿ ಭಾನುವಾರ ಬೆಳಗಿನ ಜಾವ ಒಂದೇ ಕುಟುಂಬದ ಮೂವರು ಸಜೀವ ದಹನಗೊಂಡ ಘಟನೆ ನಡೆದಿದೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅರ್ಚಕರಾಗಿದ್ದ ರಾಘವೇಂದ್ರ ಕೆಕೋಡ್(65),  ಪತ್ನಿ ನಾಗರತ್ನ(55), ಹಿರಿಯ ಪುತ್ರ ಶ್ರೀರಾಮ್(30) ಮೃತಪಟ್ಟಿದ್ದಾರೆ. ಇನ್ನೊಬ್ಬ ಪುತ್ರ ಭರತ್(28) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Crime logo

READ | ಅರುಣ್ ಕುಮಾರ್ ಪುತ್ತಿಲ ವಿರುದ್ಧ ಸುಮೋಟೊ ಕೇಸ್, ಕಾರಣವೇನು?

ಮನೆಗೆ ಬೆಂಕಿ ತಾಕಿದ್ದೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ. ಅವರು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಅದರಲ್ಲಿ ಒಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರ ಸ್ಥಿತಿಯ ಗಂಭೀರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಘಟನೆಗೆ ಖಚಿತ ಕಾರಣ ತಿಳಿಯಬೇಕಿದೆ
ಮನೆಯ ಒಳಗೆ ಸೌದೆಗಳನ್ನು ಸಂಗ್ರಹಿಸಿಟ್ಟು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಆದರೆ, ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ. ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಖುದ್ದು ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

error: Content is protected !!