ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಅರವಳಿಕೆ ತಜ್ಞರ 4 ಹುದ್ದೆಗಳು ಹಾಗೂ ಪ್ರಸೂತಿ ತಜ್ಞರ 3 ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂಬಿಬಿಎಸ್ ಪದವೀಧರರು ಮತ್ತು ತಜ್ಞ ವೈದ್ಯರಿಂದ ಅರ್ಜಿ ಆಹ್ವಾನಿಸಿದೆ.
ಅ.17ರಂದು ಡಿ.ಎಚ್.ಓ ಕಚೇರಿಗೆ ಹಾಜರಾಗಿ
ಆಸಕ್ತರು ಅ.17ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಬಿ.ಎಚ್.ರಸ್ತೆಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಗೆ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-222382 ಅನ್ನು ಸಂಪರ್ಕಿಸುವುದು.