ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2023 ಅನ್ನು ಅ.15 ರಿಂದ 23ರ ವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2023”ನ್ನು ಓವಲ್ ಗ್ರೌಂಡ್, ಹಳೆಯ ಡಿ.ಸಿ. ಆಫೀಸ್ ಪಕ್ಕ, ಮೈಸೂರು ಇಲ್ಲಿ ಏರ್ಪಡಿಸಲಾಗುವುದು.
READ | ವಿಶ್ವ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಇಬ್ಬರು ಪ್ರಾಧ್ಯಾಪಕರಿಗೆ ಸ್ಥಾನ
ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ₹1 ಸಾವಿರ ಭದ್ರತಾ ಠೇವಣಿ ಡಿ.ಡಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸುವುದು.
ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್ https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸಲು 12 ಕೊನೆ ದಿನ
ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಅ.12ರಂದು ಸಂಜೆ 5 ಗಂಟೆಯೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ರ ಮೂಲಕ ಸಲ್ಲಿಸಲು ಕೋರಿದೆ. ನಿರ್ಮಿಸಲಾಗುವ 60 ಮಳಿಗೆಗಳನ್ನುಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ: ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ದೂ:080-22484516 / 22107704 ಅನ್ನು ಸಂಪರ್ಕಿಸಬಹುದೆಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.