ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ಪ್ರತಿ ವರ್ಷವು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನು ರಾಜ್ಯ ಸರ್ಕಾರ ಅನುಸರಿಸಿಕೊಂಡು ಬರುತ್ತಿದೆ. ಅದರಂತೆ, ಈ ಸಲವೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಪ್ರಶಸ್ತಿ ನೀಡುತ್ತಿದೆ.
ಒಟ್ಟು 19 ಕ್ಷೇತ್ರಗಳಲ್ಲಿ ಗಣ್ಯರಿಗೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಶಿವಮೊಗ್ಗದವರೂ ಇದ್ದಾರೆ.
READ | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಶೀಘ್ರ ರಾತ್ರಿ ವಿಮಾನ ಸಂಚಾರ ಆರಂಭ, ಏನಿದರ ಪ್ರಯೋಜನ?
ಯಾವ್ಯಾವ ಕ್ಷೇತ್ರದಲ್ಲಿ ಪ್ರಶಸ್ತಿ?
ಶಿವಮೊಗ್ಗದವರಾದ ಎ.ಜಿ.ಚಿದಂಬರರಾವ್ ಜಂಬೆ (AG Chidambar Rao Jambe) ಅವರಿಗೆ ರಂಗಭೂಮಿ ಕ್ಷೇತ್ರದಲ್ಲಿ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಂಘಗಳಿಗೂ ರಾಜ್ಯೋತ್ಸವ ಪ್ರಶಸ್ತಿ
ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣಗೊಂಡು 2023ರ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ 10 ಸಂಘ- ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬಹುದೆಂದು ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ನಿರ್ಧರಿಸಿದ್ದು, ಅದರನ್ವಯ ರಾಜ್ಯದ 10 ಸಂಘ- ಸಂಸ್ಥೆಗಳನ್ನು ಸಹ ಆಯ್ಕೆ ಮಾಡಲಾಗಿದೆ. ಶಿವಮೊಗ್ಗದ ಕರ್ನಾಟಕ ಸಂಘ (Karnataka sangha) ಕರ್ನಾಟಕ ಸಂಭ್ರಮ 50ರ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.
CLICK HERE FOR RAJYOTSAVA AWARD LIST