Savalanga ROB | ಸವಳಂಗ ಮೇಲ್ಸೇತುವೆ ಕಾಮಗಾರಿ ಯಾವಾಗ ಪೂರ್ಣಗೊಳ್ಳಲಿದೆ, ತಿಳಿಯಲೇಬೇಕಾದ ವಿಚಾರಗಳಿವು

ROB Savalanga

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೋಟ್ಯಂತರ ರೂ. ಅನುದಾನ ನೀಡಿದ್ದು, ಇಲ್ಲಿನ ಸಂಚಾರ ವ್ಯವಸ್ಥೆ ಗಮನಿಸಿ ಸುಗಮ ಸಂಚಾರಕ್ಕಾಗಿ ಐದು ರೈಲ್ವೆ ಮೇಲ್ಸೇತುವೆ ಹಾಗೂ ಎರಡು ರೈಲ್ವೆ ಅಂಡರ್‍ಪಾಸ್‍ಗಳನ್ನು ಸುಮಾರು 140 ಕೋಟಿ ವೆಚ್ಚದಲ್ಲಿ ಮಾಡಲಾಗುತ್ತಿದೆ. ಕಾಮಗಾರಿ ಅಂತಿಮ ಹಂತದಲ್ಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಸವಳಂಗ ರಸ್ತೆಯ ಎಲ್‍ಸಿ-49, 39 ಕೋಟಿ ವೆಚ್ಚದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ROB 3

READ | ರೈಲ್ವೆ ಸಿಬ್ಬಂದಿಗೆ ಗುಡ್ ನ್ಯೂಸ್ ನೀಡಿದ ಪ್ರಧಾನಿ ಮೋದಿ, ಯಾರಿಗೆಲ್ಲ ಅನ್ವಯ?

ಎಂಪಿ ರಾಘವೇಂದ್ರ ಹೇಳಿದ್ದೇನು?

  • ಈಗಾಗಲೇ ಸೋಮಿನಕೊಪ್ಪ ರೈಲ್ವೆ ಮೇಲ್ಸೇತುವೆ ಹಾಗೂ ಪಿಎನ್‍ಟಿ ಕಾಲೋನಿ ಬಳಿ ರೈಲ್ವೆ ಅಂಡರ್ ಪಾಸ್ ಒಟ್ಟು 27 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಂಡಿವೆ.
  • ಭದ್ರಾವತಿ ತಾಲೂಕಿನ ಕಡದಕಟ್ಟೆ ಬಳಿ ಎಲ್.ಸಿ-34 ಮೇಲ್ಸೇತುವೆ ಕಾಮಗಾರಿ ಕೂಡ ಪ್ರಗತಿಯಲ್ಲಿದೆ. ವಿದ್ಯಾನಗರದ ರೈಲ್ವೆ ಮೇಲ್ಸೇತುವೆ 43 ಕೋಟಿ ವೆಚ್ಚದಲ್ಲಿ ಅತ್ಯಂತ ಸುಂದರವಾಗಿ ನಿರ್ಮಾಣಗೊಂಡಿದ್ದು, ಪೂರ್ಣಗೊಳ್ಳುವ ಹಂತದಲ್ಲಿದೆ.
  • ಡಿಸೆಂಬರ್ ಅಂತ್ಯಕ್ಕೆ ಎಲ್ಲ ಕಾಮಗಾರಿ ಮುಗಿದು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ.
  • ಕೆಲವು ಕಡೆ ಅಡ್ಡರಸ್ತೆ ಕಾಮಗಾರಿಗಳು ಹೆಚ್ಚುವರಿಯಾಗಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹೆಚ್ಚುವರಿಯಾಗಿ ಎರಡು ಸಣ್ಣ ಸೇತುವೆ ಗಳನ್ನು ಕೂಡ ಮಾಡಲಾಗುತ್ತಿದೆ.

ROB 2
ಇತಿಹಾಸದಲ್ಲಿ ಇದೇ ಮೊದಲು
ಇತಿಹಾಸದಲ್ಲೇ ಇಷ್ಟೊಂದು ವೇಗವಾಗಿ ರೈಲ್ವೆ ಕಾಮಗಾರಿಗಳು ಮುಗಿಯುತ್ತಿರುವುದು ಇದೇ ಮೊದಲು. ಇದಕ್ಕಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅಂತ್ಯಕ್ಕೆ ಎಲ್ಲಾ ಕಾಮಗಾರಿ ಮುಗಿದು ಸಾರ್ವ ಜನಿಕರ ಉಪಯೋಗಕ್ಕೆ ಸಿಗಲಿದೆ ಎಂದು ಹೇಳಿದರು.
ಕೆಲವು ಕಡೆ ಅಡ್ಡರಸ್ತೆ ಕಾಮಗಾರಿಗಳು ಹೆಚ್ಚುವರಿಯಾಗಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹೆಚ್ಚುವರಿಯಾಗಿ ಎರಡು ಸಣ್ಣ ಸೇತುವೆಗಳನ್ನು ಕೂಡ ಮಾಡಲಾಗುತ್ತಿದೆ. ರೈಲ್ವೆ ಅಧಿಕಾರಿಗಳು ಕೂಡ ಅತ್ಯಂತ ಸಹಕಾರ ನೀಡಿದ್ದಾರೆ. ಶಿವಮೊಗ್ಗ ನಗರದ ಅಭಿವೃದ್ಧಿ ದೃಷ್ಟಿಯಿಂದ ಈ ಕಾಮಗಾರಿಗಳಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅತ್ಯಂತ ಅನುಕೂಲವಾಗಲಿದೆ ಎಂದು ಹೇಳಿದರು.
ರೈ ಇಂಜಿನಿಯರ್ ರಾಜ್‍ಕುಮಾರ್, ಸ್ಮಾರ್ಟ್ ಸಿಟಿ ಕಾರ್ಯಪಾಲಕ ಇಂಜಿನಿಯರ್ ವಿಜಯಕುಮಾರ್, ಕರ್ನಾಟಕ ಜಲ ಮಂಡಳಿ ಕಾರ್ಯಪಾಲಕ ಇಂಜಿನಿಯರ್ ಸಿದ್ದಪ್ಪ, ಸ್ಥಳೀಯ ಕಾಪೆರ್Çರೇಟರ್ ಇ.ವಿಶ್ವಾಸ್, ಬಿಜೆಪಿ ನಗರಾಧ್ಯಕ್ಷ ಜಗದೀಶ್, ಪ್ರಮುಖರಾದ ಜ್ಯೋತಿಪ್ರಕಾಶ್, ಮಾಲತೇಶ್, ದಿವಾಕರ ಶೆಟ್ಟಿ, ರಾಜೇಶ್ ಕಾಮತ್ ಮತ್ತಿತರರಿದ್ದರು.

ROB 1

error: Content is protected !!