ಸುದ್ದಿ ಕಣಜ.ಕಾಂ ಸಾಗರ
SAGAR: ನಾಡಿನ ಪ್ರಸಿದ್ಧ ಶಕ್ತಿ ದೇವತೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡಮ್ಮ ದೇವಸ್ಥಾನದಲ್ಲಿ ಅ.15 ರಿಂದ 24ರ ವರೆಗೆ ನವರಾತ್ರಿ ಉತ್ಸವ ನೆಡೆಯಲಿದೆ ಎಂದು ದೇವಳ ಆಡಳಿತ ಮಂಡಳಿ ತಿಳಿಸಿದೆ.
READ | ಸಿಗಂದೂರು ಚೌಡೇಶ್ವರಿ ಸೇರಿ 9 ದೇವಿಯರ ಪರಿಚಯ, ದೇವಾಲಯದ ಇತಿಹಾಸ, ಮಹತ್ವ ತಿಳಿಸುವ ಕಾರ್ಯಕ್ರಮ, ಏನಿದೆ ವೇಳಾಪಟ್ಟಿ?
ಈ ವರ್ಷದ ನವರಾತ್ರಿ ಉತ್ಸವಕ್ಕೆ ಚೆನ್ನೈ ಆದಾಯ ತೆರಿಗೆ ಮೇಲ್ಮನವಿ ಮಂಡಳಿ ಸದಸ್ಯ ಜಿ.ಮಂಜುನಾಥ ಚಾಲನೆ ನೀಡಲಿದ್ದಾರೆ. ಸೋಲೂರು ಈಡಿಗ ಮಹಾ ಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿ, ಶಿವಮೊಗ್ಗ ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ, ಸಾರಗನಜಡ್ಡು ಯೋಗೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿ ಅಶಿರ್ವಚನ ನೀಡಲಿದ್ದಾರೆ.
ನಿತ್ಯ ವಿಶೇಷ ಅಲಂಕಾರ, ಮಹಾಪೂಜೆ
ನವರಾತ್ರಿ ಉತ್ಸವದ ಪ್ರಯುಕ್ತ ದೇವಿಗೆ ಪ್ರತಿನಿತ್ಯ ತೈಲಾಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ, ಗಣಹೋಮ, ಚಂಡಿಕಾ ಹವನ ನೆಡೆಯಲಿದ್ದು ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಅನುವಂಶಿಕ ಧರ್ಮಾಧಿಕಾರಿ ಎಸ್ ರಾಮಪ್ಪನವರ ನೇತೃತ್ವದಲ್ಲಿ ನಡೆಯಲಿದೆ.
ಪ್ರತಿನಿತ್ಯ ಸಂಜೆ 5 ರಿಂದ ದೀಪೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು. ನವರಾತ್ರಿ ಸಂದರ್ಭದಲ್ಲಿ ಭಕ್ತಾದಿಗಳಿಗೆ ವಸತಿ, ದರ್ಶನ, ನಿತ್ಯ ಪೂಜೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಎಚ್.ಆರ್.ರವಿಕುಮಾರ್ ತಿಳಿಸಿದ್ದಾರೆ.