ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ(ಡಿಎಸ್ಟಿ) ವತಿಯಿಂದ ವಿಜ್ಞಾನ ಮತ್ತು ಇಂಜಿನಿಯರಿಂಗ್ನಲ್ಲಿ ಪಿಎಚ್ಡಿ ಸಂಶೋಧನೆಗೆ ಕರ್ನಾಟಕ ಡಿಎಸ್ಟಿ-ಪಿಎಚ್ಡಿ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
2023-24ನೇ ಸಾಲಿನಲ್ಲಿ ಈ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆ/ ಕಾಲೇಜುಗಳಲ್ಲಿ ಈಗಾಗಲೇ ಪಿಎಚ್ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ವೆಬ್ಸೈಟ್ http://ksteps.karnataka.gov.in ಇಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕಡೆಯ ದಿನವಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ರೈತರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ
SHIMOGA: ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯವು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಮಲೆನಾಡು ಗಿಡ್ಡ ತಳಿ ಹೊಂದಿರುವ ಸಣ್ಣ ಹಿಡುವಳಿದಾರರಿಗೆ ಹುಲ್ಲುಗಾವಲು ನಿರ್ವಹಣೆ ಯೋಜನೆಯಡಿಯಲ್ಲಿ ಅ.11ರಂದು ನಗರದ ವಿನೋಬನಗರದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಪ್ರಾಣಿ ಅನುವಂಶೀಯತೆ ಹಾಗೂ ತಳಿ ಶಾಸ್ತ್ರ ವಿಭಾಗದಲ್ಲಿ ಮೇವು ಬೆಳೆಗಳ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಹೆಸರು ನೋಂದಾಯಿಸಿ
ಆಸಕ್ತಿಯುಳ್ಳವರು ಮೊ.ಸಂ.: 9481254254 / 8310384135 ಗಳಿಗೆ ಎಸ್.ಎಂ.ಎಸ್/ವಾಟ್ಸಾಪ್ ಮಾಡಿ ನೊಂದಾಯಿಸಿಕೊಳ್ಳುವುದು ಅಥವಾ ಡಾ.ಆರ್. ಜಯಶ್ರೀ, ಸಹ ಪ್ರಾಧ್ಯಾಪಕರು ಹಾಗೂ ರಾ.ಕೃ.ವಿಕಾಸ ಯೋಜನಾ ಸಂಯೋಜಕರು, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಿ ನೋಂದಾಯಿಸಿಕೊಂಡು ತರಬೇತಿಯ ಉಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
READ | ಸಿಕ್ಕಿದ ವಿಡಿಯೋ ಶೇರ್ ಮಾಡುವವರೇ ಹುಷಾರ್, ಶಿವಮೊಗ್ಗ ಪೊಲೀಸರಿಂದ ಇಂಥವರ ವಿರುದ್ಧ ಸಮರ
ರಾಷ್ಟ್ರೀಯ ಸಮ್ಮೇಳನ
SHIMOGA: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ಕ್ಲೈಮೇಟ್ ರಿಸೈಲೆನ್ಸ್ ಆ್ಯಂಡ್ ಸಬ್ ಸ್ಟ್ಯಾನ್ಶಿಯಲ್ ಡೆವೆಲಪ್ ಮೆಂಟ್’ ವಿಷಯ ಕುರಿತು ನ.21 ರಿಂದ 24 ರವರೆಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ಜಿಕೆವಿಕೆ ಆವರಣ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು ಇಲ್ಲಿ ಆಯೋಜಿಸಲಾಗಿದೆ.
ಕಾರ್ಯಾಗಾರದಲ್ಲಿ ನುರಿತ ಸಂಪನ್ಮೂಲ ತಜ್ಞರು ಉಪನ್ಯಾಸ ನೀಡುವರು. ಅಲ್ಲದೇ ಈ ಸಮ್ಮೇಳನದಲ್ಲಿ ಪೇಪರ್ ಪ್ರೆಸೆಂಟೇಷನ್ ಆ್ಯಂಡ್ ವರ್ಕಿಂಗ್ ಮಾಡೆಲ್ ಸಹ ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದ್ದು ಆಯ್ಕೆಯಾದ ಪೇಪರ್ ಆಂಡ್ ಮಾಡೆಲ್ಗಳಿಗೆ ಬಹುಮಾನವನ್ನು ನೀಡಲಾಗುವುದು. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಸಂಶೋಧಕರು/ ವಿಜ್ಞಾನಿಗಳು ಹಾಗೂ ಪ್ರಾಧ್ಯಾಪಕರು/ಉಪನ್ಯಾಸಕರು ಭಾಗವಹಿಸಬಹುದು.
ನಿಗದಿತ ಶುಲ್ಕವನ್ನು ಪಾವತಿಸಿ ದಿ: 15-11-2023 ರೊಳಗೆ ಗೂಗಲ್ ಫಾರ್ಮ್ (https://forms.gle/VBZdYHcawb4uU9Jb9) ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೊ.ಸಂ: 9845258894 ಅಥವಾ ಅಕಾಡೆಮಿ ವೆಬ್ಸೈಟ್ www.kstacademy.in ವೀಕ್ಷಿಸಬಹುದೆಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ತಿಳಿಸಿದ್ದಾರೆ.
ಹೊಸನಗರದಲ್ಲಿ ಲೋಕಾಯುಕ್ತ ಕುಂದು-ಕೊರತೆ ಸಭೆ
HOSANAGAR: ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಅ.11 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊಸನಗರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ. ಈ ಸಭೆಗೆ ಸಾರ್ವಜನಿಕರು ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವುದರಲ್ಲಿ ಸರ್ಕಾರಿ ಅಧಿಕಾರಿಗಳು ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಲು ಕೋರಲಾಗಿದೆ.
Fire accident | ತೀರ್ಥಹಳ್ಳಿಯಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ, ಒಬ್ಬನ ಸ್ಥಿತಿ ಗಂಭೀರ, ಇಡೀ ಗ್ರಾಮವೇ ದಂಗು