Section 144 | ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ವಾಪಸ್, ರಾಗಿಗುಡ್ಡ ವಿಚಾರದಲ್ಲಿಲ್ಲ ರಿಲ್ಯಾಕ್ಷೇಶನ್, ಏನೆಲ್ಲ ನಿಬಂಧನೆ ಅನ್ವಯ?

Ragigudda

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಗಿಗುಡ್ಡದಲ್ಲಿ (Ragigudda) ನಿಷೇಧಾಜ್ಞೆಯನ್ನು ಅ.8ರಿಂದ ಮುಂದಿನ ಆದೇಶದವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ಆದೇಶಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ ಇರುವುದರಿಂದ ಶಿವಮೊಗ್ಗದ ರಾಗಿಗುಡ್ಡ, ಶಾಂತಿನಗರ ವ್ಯಾಪ್ತಿಯನ್ನು ಹೊರತುಪಡಿಸಿ, ಶಿವಮೊಗ್ಗ ಮಹಾನಗರ ಪಾಲಿಕೆಯ ಇತರ ಪ್ರದೇಶದಲ್ಲಿ ಕಲಂ 144 ಸಿಆರ್‌ಪಿಸಿ ಆದೇಶವನ್ನು ತೆರವುಗೊಳಿಸುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗದ ರಾಗಿಗುಡ್ಡ- ಶಾಂತಿನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಕೆಳಕಂಡ ನಿಬಂಧನೆಗಳನ್ನು ವಿಧಿಸಿ ನಿಷೇಧಾಜ್ಞೆಯನ್ನು ಮುಂದುವರಿಸಲಾಗಿದೆ.

Shivamogga DC Dr R Selvamani
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ

READ |  ತೀರ್ಥಹಳ್ಳಿಯಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ, ಒಬ್ಬನ ಸ್ಥಿತಿ ಗಂಭೀರ, ಗ್ರಾಮದ ಜನ ದಂಗು

ಏನೆಲ್ಲ ನಿಬಂಧನೆಗಳು ಅನ್ವಯ?

  • ನಿಷೇಧಿತ ಅವಧಿಯಲ್ಲಿ ಐದು ಜನಕ್ಕಿಂತ ಹೆಚ್ಚು ಜನರು ಗುಂಪುಗುವುದನ್ನು ಮತ್ತು ಓಡಾಡುವುದನ್ನು ನಿಷೇಧಿಸಲಾಗಿದೆ.
  • ನಿಷೇಧಾಜ್ಞೆ ಅವಧಿಯಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆ ಹಾಗೂ ಸಭೆ-ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ.
  • ಯಾವುದೇ ರೀತಿಯ ಘೋಷಣೆಗಳನ್ನು ಕೂಗುವುದು, ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವುದನ್ನು ಹಾಗೂ ಪ್ರಚೋದನಾಕಾರಿ ಪ್ಲೆಕ್ಸ್, ಟ್ಯಾನರ್, ಬಂಟಿಂಗ್ಸ್ ಕಟ್ಟುವುದನ್ನು ನಿಷೇಧಿಸಲಾಗಿದೆ.
  • ಯಾವುದೇ ರೀತಿಯ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವುದು ಮತ್ತು ಉಪಯೋಗಿಸುವುದು, ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ಮತ್ತು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
  • ಈ ಹಿಂದೆಯೇ ಪೂರ್ವಾನುಮತಿಯನ್ನು ಪಡೆದು ನಿಗದಿಯಾದಂತಹ ಕಾರ್ಯಕ್ರಮಗಳನ್ನು ನಡೆಸಲು ಅನುಮತಿಸಿದೆ.
  • ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತ ಕಲಂ 188ರ ಪ್ರಕಾರ ಶಿಸ್ತು ಕ್ರಮವನ್ನು ಜರುಗಿಸಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

error: Content is protected !!