ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (shriram sena pramod muthalik) ಅವರು ನಗರದ ರಾಗಿಗುಡ್ಡಕ್ಕೆ (Ragigudda) ಭೇಟಿ ನೀಡುವ ಉದ್ದೇಶದಿಂದ ಶಿವಮೊಗ್ಗ(shimoga)ಕ್ಕೆ ಬರುತ್ತಿರುವಾಗಲೇ ಅವರನ್ನು ತಡೆದು ವಾಪಸ್ ಕಳುಹಿಸಿದ ಘಟನೆ ನಡೆದಿದೆ.
READ | ಶಿವಮೊಗ್ಗದಿಂದ ದೇಶದ ಮೂರು ಪ್ರಮುಖ ರಾಜ್ಯಗಳಿಗೆ ವಿಮಾನ ಸಂಚಾರಕ್ಕೆ ಡೇಟ್ ಫಿಕ್ಸ್, ಇಲ್ಲಿದೆ ವೇಳಾಪಟ್ಟಿ
ಗಲಭೆ ಪೀಡಿತ ಪ್ರದೇಶವಾದ ರಾಗಿಗುಡ್ಡಕ್ಕೆ ಭೇಟಿ ನೀಡಬೇಕಿದ್ದ ಅವರಿಗೆ 30 ದಿನಗಳ ಕಾಲ ಶಿವಮೊಗ್ಗಕ್ಕೆ ಭೇಟಿ ನೀಡದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಹೀಗಾಗಿ, ಅವರನ್ನು ತಡರಾತ್ರಿ 2 ಗಂಟೆ ಸುಮಾರಿಗೆ ರಸ್ತೆ ಮಧ್ಯೆ ತಡೆದು ವಾಪಸ್ ಕಳುಹಿಸಲಾಯಿತು.
ಬಸ್’ನಲ್ಲಿದ್ದ ಮುತಾಲಿಕ್ ಗೆ ತಡೆದ ಪೊಲೀಸ್
ಮಂಗಳೂರಿನಿಂದ ಶಿವಮೊಗ್ಗಕ್ಕೆ ಬಸ್ ನಲ್ಲಿ ಬರುತ್ತಿದ್ದ ವೇಳೆ ತಡರಾತ್ರಿ ಎರಡು ಗಂಟೆ ಸುಮಾರಿಗೆ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ತಡೆದ ಪೊಲೀಸರು, ಮುತಾಲಿಕ್ ಅವರನ್ನು ವಶಕ್ಕೆ ಪಡೆದು ನಿರ್ಬಂಧದ ಆದೇಶ ಪ್ರತಿ ನೀಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಪೊಲೀಸ್ ಬೆಂಗಾವಲು ವಾಹನದೊಂದಿಗೆ ಪ್ರತ್ಯೇಕ ಕಾರಿನಲ್ಲಿ ದಾವಣಗೆರೆಗೆ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ಕಳುಹಿಸಿದರು. ಪೊಲೀಸ್ ಇಲಾಖೆಯ ಕೋರಿಕೆ ಮೇರೆಗೆ ಅಕ್ಟೋಬರ್ 17 ರಿಂದ 30 ದಿನಗಳು ಜಿಲ್ಲೆಗೆ ಭೇಟಿ ನೀಡದಂತೆ ಮುತಾಲಿಕ್ ಗೆ ನಿರ್ಬಂಧ ವಿಧಿಸಿ ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ.
ರಾಗಿಗುಡ್ಡವೇನು ಪಾಕಿಸ್ತಾನದಲ್ಲಿದೆಯೇ?
SHIMOGA: ಪ್ರಮೋದ್ ಮುತಾಲಿಕ್ ಅವರನ್ನು ತಡರಾತ್ರಿ ತಡೆದು ವಾಪಸ್ ಕಳುಹಿಸಲಾಗಿದೆ. ಅವರೇನು ದರೋಡೆಕೋರರಾ? ಅಥವಾ ರಾಗಿಗುಡ್ಡ ಏನಾದರೂ ಪಾಕಿಸ್ತಾನದಲ್ಲಿ ಇದೆಯೇ? ಎಂದು ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಅಧ್ಯಕ್ಷ ಗಂಗಾಧರ ಕುಲಕರ್ಣಿ ಪ್ರಶ್ನಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಈ ಸವಾಲನ್ನು ಸ್ವೀಕರಿಸಿದ್ದೇವೆ. ಮುಂಬರುವ ದಿನಗಳಲ್ಲಿ ಶಿವಮೊಗ್ಗಕ್ಕೆ ಮತ್ತೆ ಬಂದೇ ಬರುತ್ತೇವೆ ಎಂದರು.
ಶ್ರೀರಾಮ ಸೇನೆ ಆಕ್ರೋಶ
ಶಿವಮೊಗ್ಗದಲ್ಲಿ ಬಾಂಬ್ ಸ್ಫೋಟ ಮಾಡುವವರಿಗೆ, ಕೊಲೆ ಮಾಡುವವರಿಗೆ, ಹಿಂದೂಗಳ ಮನೆ ಮೇಲೆ ಕಲ್ಲು ಎಸೆಯುವವರಿಗೆ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವವರಿಗೆ ನಿರ್ಬಂಧ ಇಲ್ಲ. ಆದರೆ, ಪ್ರಮೋದ್ ಮುತಾಲಿಕ್ ಹಾಗೂ ಶ್ರೀರಾಮ ಸೇನೆಯವರಿಗೆ ಮಾತ್ರ ನಿರ್ಬಂಧ ಹೇರಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಎರಡ್ಮೂರು ದಿನಗಳಲ್ಲಿ ಶಿವಮೊಗ್ಗ ಚಲೋ ಹೋರಾಟ ಶ್ರೀರಾಮ ಸೇನೆಯಿಂದ ನಡೆಯುತ್ತದೆ. ಯಾರು ತಡೆಯುತ್ತಾರೆ ನೋಡೋಣ. ಸಿಎಂ ಸಿದ್ದರಾಮಯ್ಯ ಅವರೇ ಮುಸ್ಲಿಮರ ತುಷ್ಟೀಕರಣ ಸಾಕು ಎಂದು ಹೇಳಿದರು.
Stone pelting | ರಾಗಿಗುಡ್ಡದಲ್ಲಿ ಈಗ ಹೇಗಿದೆ ಸ್ಥಿತಿ?, ಎಷ್ಟು ಮನೆಗಳು ಜಖಂ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್