ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಗಿಗುಡ್ಡದಲ್ಲಿ ಮೆರವಣಿಗೆ ಮತ್ತು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ತೂರಾಟದ ಬೆನ್ನಲ್ಲೇ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ತಕ್ಷಣ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ರಾಗಿಗುಡ್ಡ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.
ಆರ್.ಎಎಫ್, ಕೆಎಸ್.ಆರ್ಪಿ ಸೇರಿದಂತೆ ವಿವಿಧ ಪೊಲೀಸರು ಸ್ಥಳದಲ್ಲೇ ಮೊಕ್ಕಾ ಹೂಡಿದ್ದಾರೆ. ಯಾವುದೇ ರೀತಿಯ ದುಷ್ಕೃತ್ಯಗಳು ನಡೆಯದಂತೆ ಎಚ್ಚರವಹಿಸಲಾಗಿದೆ.
READ | ರಾಗಿಗುಡ್ಡದಲ್ಲಿ ಈದ್ ಮಿಲಾದ್ ಕಟೌಟ್ ವಿಚಾರವಾಗಿ ಗೊಂದಲ, ಸ್ಥಳಕ್ಕೆ ಎಸ್.ಪಿ ಭೇಟಿ
ನಾಲ್ಕೈದು ಜನರಿಗೆ ಗಾಯ
ರಾಗಿಗುಡ್ಡದಲ್ಲಿ ಕಲ್ಲು ತೂರಾಟ ನಡೆಸಿರುವ ಪ್ರಕರಣದಲ್ಲಿ ನಾಲ್ಕೈದು ಜನರಿಗೆ ಗಾಯಗಳಾಗಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಲಾಗುತ್ತಿದೆ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸ್ ವಾಹನಗಳು, ಸ್ಥಳೀಯ ವಾಹನಗಳು ಜಖಂಗೊಂಡಿವೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ.