Stone pelting case | ರಾಗಿಗುಡ್ಡ ಕಲ್ಲು ತೂರಾಟ ಪ್ರಕರಣ, 43 ಜನರ ಬಂಧನ

Siddaramaiah CM

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಗಿಗುಡ್ಡದಲ್ಲಿ ಭಾನುವಾರ ಸಂಜೆ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

CM tweet
ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್

ಟ್ವೀಟ್’ನಲ್ಲಿ ಏನಿದೆ?
ಯಾವುದೇ ಧಾರ್ಮಿಕ ಕಾರ್ಯಕ್ರಮಕ್ಕೆ ಧಕ್ಕೆ ತರುವುದು, ಕಲ್ಲು ತೂರುವುದು ಕಾನೂನು ಬಾಹಿರ. ಇಂಥ ಚಟುವಟಿಕೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ, ಇಂತಹ ಕೃತ್ಯಗಳನ್ನು ಖಂಡಿತಾ ಹತ್ತಿಕ್ಕುತ್ತೇವೆ.

VIDEO REPORT

For more updates follow us CLICK HERE

ಶಿವಮೊಗ್ಗ ನಗರ ಸಂಪೂರ್ಣ ನಿಯಂತ್ರಣದಲ್ಲಿದೆ. ಪೊಲೀಸರು ಕ್ಷಿಪ್ರ ಕ್ರಮ ಕೈಗೊಂಡಿದ್ದರಿಂದ ನಗರದಲ್ಲಿ ಶಾಂತಿ ನೆಲೆಸಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.
43 ಜನರ ಬಂಧನ
ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರ ಮೇಲೂ ಕಲ್ಲು ಎಸೆದಿದ್ದು, ಅನಿವಾರ್ಯವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಗಲಾಟೆಗೆ ಕಾರಣಕರ್ತರಾಗಿರುವ 43 ದುಷ್ಕರ್ಮಿಗಳನ್ನು ಬಂದಿಸಿದ್ದು ಅವರ ಮೇಲೆ ಮೊಕದ್ದಮೆಗಳನ್ನು ಹೂಡಲಾಗುತ್ತಿದೆ ಎಂದು ಸಿಎಂ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Stone pelting | ರಾಗಿಗುಡ್ಡದಲ್ಲಿ ಈಗ ಹೇಗಿದೆ ಸ್ಥಿತಿ?, ಎಷ್ಟು ಮನೆಗಳು ಜಖಂ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

 

error: Content is protected !!