Jobs in shimoga | ವಿ.ಆರ್.ಡಬ್ಲ್ಯೂ ಹುದ್ದೆಗೆ ಅರ್ಜಿ ಆಹ್ವಾನ, ಅರ್ಹರು ಕೂಡಲೇ ಅರ್ಜಿ ಸಲ್ಲಿಸಿ

IMG 20220517 232257 102

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಗ್ರಾಮೀಣ ಪುನರ್ವಸತಿ ಯೋಜನೆಯಡಿ ಶಿಕಾರಿಪುರ ತಾಲ್ಲೂಕಿನ ಬಿಳಿಕಿ ಗ್ರಾಮ ಪಂಚಾಯಿತಿಯಲ್ಲಿ ವಿ.ಆರ್.ಡಬ್ಲ್ಯೂ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

READ | ಶಿವಮೊಗ್ಗದಲ್ಲಿ ಮಹಾ ಮೋಸದ ಜಾಲ‌ಪತ್ತೆ, ಬ್ಯಾಂಕ್ ಗಳನ್ನೇ ಯಾಮಾರಿಸಿ ಲಕ್ಷಾಂತರ ಹಣ ದೋಖಾ

ಅರ್ಜಿದಾರರು 18 ರಿಂದ 45 ವರ್ಷದೊಳಗಿನವರಾಗಿದ್ದು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಾಸವಿರುವ ಅರ್ಹ ವಿಕಲಚೇತನ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯನ್ನು ಶಿಕಾರಿಪುರ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಎಂ.ಆರ್.ಡಬ್ಲ್ಯೂ ಆಗಿ ಕಾರ್ಯನಿರ್ವಹಿಸುತ್ತಿರುವ ಹುಚ್ಚರಾಯಪ್ಪ ದೂರವಾಣಿ ಸಂಖ್ಯೆ : 9741161346 ಇವರಿಂದ ಅರ್ಜಿ ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯೊಂದಿಗೆ ವಿ.ಆರ್.ಡಬ್ಲ್ಯೂ ಹುದ್ದೆಗೆ ಅಗತ್ಯವಾದ ದಾಖಲಾತಿಗಳಾದ 10ನೇ ತರಗತಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ತಹಶೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯು.ಡಿ.ಐ.ಡಿ ಕಾರ್ಡ್‌ ನೊಂದಿಗೆ ನ.21 ರೊಳಗೆ ಅರ್ಜಿ ಸಲ್ಲಿಸುವಂತೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!